ಚಿತ್ರದುರ್ಗ: ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಲವು ಶಾಸಕರು, ಸಚಿವರು ಸರ್ಕಾರ ಅನುದಾನ ನೀಡದಿರುವುದಕ್ಕೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಈಗ ಮತ್ತೆ ಮೊಳಕಾಲ್ಮುರು ಹಿರಿಯ ಶಾಸಕ ಎನ್ ವೈ ಗೋಪಾಲಕೃಷ್ಣ ಮತ್ತೊಮ್ಮೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೊಳಕಾಲ್ಮುರು ತಾಲ್ಲೂಕಿನ ಕಣಕುಪ್ಪೆಯಲ್ಲಿ ನಡೆದ ಟೂಲ್ ಫ್ಯಾಬ್ ಕಂಪನಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ಭಾಷಣ ಮಾಡುವ ವೇಳೆ ಎನ್ವೈ ಗೋಪಾಲಕೃಷ್ಣ ನಾನು ಶಾಸಕ ಆಗಿದ್ರು ನಮ್ಮ ಊರಲ್ಲಿ ಒಂದು ಚರಂಡಿ, ರಸ್ತೆ ಮಾಡಕ್ಕಾಗುತ್ತಿಲ್ಲ, ಕಣ್ಣಿಗೆ ಕಾಣುವಂತೆ ಒಂದು ಶಾಲೆ ಕಟ್ಟಕ್ಕಾಗಲ್ಲ, ಈಗ ನಾಲ್ಕಾಣೆ ಕೆಲಸ ಆಗಿದೆ ಇನ್ನು ಹನ್ನೆರೆಡಾಣೆ ಕೆಲಸ ಬಾಕಿ ಇದೆ ಎಂದು ಪರೋಕ್ಷವಾಗಿ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಸರ್ಕಾರಕ್ಕೆ ತಿವಿದಿದ್ದಾರೆ. ತಮ್ಮದೇ ಸರ್ಕಾರವನ್ನು ಟೀಕಿಸಿದ ಶಾಸಕ ಎನ್ ವೈ ಗೋಪಾಲಕೃಷ್ಣ ಅವರ ವಿಡಿಯೋವನ್ನು ವಿರೋಧ ಪಕ್ಷದ ಮುಖಂಡರು, ನಾಯಕರು ಸರ್ಕಾರದ ವಿರುದ್ಧ ಅಸ್ತ್ರವಾಗಿಸಿಕೊಂಡು ವಾಗ್ದಾಳಿ ನಡೆಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



