ನಂದಿಬೆಟ್ಟ: ಕಳೆದ ತಿಂಗಳಷ್ಟೇ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಿದ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಸರನ್ನು ‘ಬೆಂಗಳೂರು ಉತ್ತರ ಜಿಲ್ಲೆ’ ಎಂದು ಹಾಗೂ ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯ ನಗರ ಎಂದು ಮರು ನಾಮಕರಣ ಮಾಡಲು ನಂದಿಬೆಟ್ಟದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ವಿರೋಧಪಕ್ಷಗಳ ತೀವ್ರ ವಿರೋಧದ ನಡುವೆಯೇ ಬೆಂಗಳೂರು ಕೇಂದ್ರ ವಿವಿಗೆ ಮಾಜಿ ಪ್ರಧಾನಿ ದಿ.ಡಾ.ಮನ ಮೋಹನ್ ಸಿಂಗ್ ಹೆಸರಿಡಲು ತೀರ್ಮಾನಿಸಲಾಗಿದ್ದು, ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರು ನಾಮಕರಣದ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ. ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣವನ್ನು ‘ಜನೋಪಕಾರಿ ಶ್ರೀ ದೊಡ್ಡಣ್ಣ ಶೆಟ್ಟರ ಕಲಾಸಿಪಾಳ್ಯ ಬಸ್ ನಿಲ್ದಾಣ’ ಎಂದು ಮರು ನಾಮಕರಣಕ್ಕೆ ಸಭೆ ತೀರ್ಮಾನಿಸಿದೆ.
3,500 ಕೋಟಿ ರು. ಲಾಭ..?
ಮೊದಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಬದಲಿಸುವ ಬಗ್ಗೆ ಚರ್ಚಿಸಲಾಯಿತು. ಈ ವೇಳೆ ಕೇಂದ್ರ ಸರ್ಕಾರ ಅನುದಾನ ನೀಡುವಾಗ ನಗರ ಜಿಲ್ಲೆಗಳಿಗೆ ಒಂದು ಅನುದಾನ ಹಾಗೂ ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿರುವ ಜಿಲ್ಲೆಗಳಿಗೆ ಒಂದು ಅನುದಾನ ನೀಡುತ್ತದೆ. ಬೆಂಗಳೂರು ಗ್ರಾಮಾಂತರ ಬದಲಿಗೆ ಬೆಂಗಳೂರು ಉತ್ತರ ಎಂದು ಬದಲಿಸಿದರೆ 3,500 ಕೋಟಿ ರು. ಹೆಚ್ಚುವರಿ ಅನುದಾನ ಬರುತ್ತದೆ ಎಂದು ಪ್ರಸ್ತಾಪಿಸಲಾಯಿತು. ಈ ಹಿನ್ನೆಲೆಯಲ್ಲಿ ಸದಸ್ಯರು ಸರ್ವಾನುಮತದಿಂದ ಒಪ್ಪಿಗೆ ನೀಡಿ ದರು ಎಂದು ಮೂಲಗಳು ತಿಳಿಸಿವೆ. ನಂದಿಬೆಟ್ಟದ ಸಂಪುಟ ಸಭೆ ತೀರ್ಮಾನ
ವಿವಿಧ ಸ್ಕೀಂ ಗಳಿಗೆ ₹3400 ಅನುದಾನ
ಬೆಂಗಳೂರು ವಿಭಾಗದ ವ್ಯಾಪ್ತಿಯ ಜಿಲ್ಲೆಗಳಲ್ಲಿ 2,050 ಕೋಟಿ ರು. ವೆಚ್ಚದ ವಿವಿಧ ಕಾಮಗಾರಿ ಸೇರಿ ಒಟ್ಟು 3,400 ಕೋಟಿ ರು. ವೆಚ್ಚದ ವಿವಿಧ ಯೋಜನೆಗಳಿಗೆ ನಂದಿಬೆಟ್ಟದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ. ವಿಶೇಷ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಪುಟ ಸಭೆಯಲ್ಲಿ ಒಟ್ಟು 48 ವಿಷಯಗಳ ಬಗ್ಗೆ ಒಪ್ಪಿಗೆ ನೀಡಿದ್ದು, ಈ ಪೈಕಿ 31 ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ಸೇರಿದ್ದಾಗಿದೆ. 3,400 ಕೋಟಿ ರು. ವೆಚ್ಚದ ಕಾಮಗಾರಿಗಳಲ್ಲಿ 2,050 ಕೋಟಿ ರು. ವೆಚ್ಚದ ಕಾಮಗಾರಿ ಹಾಗೂ ಯೋಜನೆಗಳನ್ನು ಈ ಭಾಗದಲ್ಲೇ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ವಿವರ 9
ಗಣಿ ಅಕ್ರಮ ತನಿಖೆಯ ಪ್ರಗತಿ ವರದಿ ಪರಿಶೀಲಿಸಲು ಸಂಪುಟ ಉಪಸಮಿತಿ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಈವರೆಗೆ ಆಗಿರುವ ತನಿಖಾ ಪ್ರಗತಿ ಹಾಗೂ ಮುಂದೆ ಆಗಬೇಕಿರುವ ಕ್ರಮಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಲು ನಂದಿಬೆಟ್ಟದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಸಮ್ಮತಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



