ಕೊಚ್ಚಿ: ಕನ್ನಡದ ‘ಗಜ’ ಖ್ಯಾತಿಯ ನಟಿ ನವ್ಯಾ ನಾಯರ್ ಗೆ ಆಸ್ಟ್ರೇಲಿಯಾದ ಮೆಲ್ಬೋರ್ನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ.1.1 ಲಕ್ಷ ದಂಡ ಹಾಕಲಾಗಿದೆ. ಮಲ್ಲಿಗೆ ಹೂಗಳನ್ನು ಕೊಂಡೊಯ್ದಿದ್ದಕ್ಕಾಗಿ ನಟಿ ನವ್ಯಾ ನಾಯರ್ ಅವರಿಗೆ ಸುಮಾರು 1.14 ಲಕ್ಷ ದಂಡ ವಿಧಿಸಲಾಗಿದೆ.ವಿಕ್ಟೋರಿಯಾದಲ್ಲಿ ಮಲಯಾಳಿ ಅಸೋಸಿಯೇಷನ್ನ ಓಣಂ ಆಚರಣೆಯಲ್ಲಿ ಭಾಗವಹಿಸಿದ್ದಾಗ ಈ ಘಟನೆ ನಡೆದಿರುವುದಾಗಿ ಅವರು ಹೇಳಿಕೊಂಡಿದ್ದಾರೆ.ಆ ಕಾರ್ಯಕ್ರಮಕ್ಕಾಗಿ ನಾನು ಒಂದು ಲಕ್ಷಕ್ಕೂ ಹೆಚ್ಚು ಮೌಲ್ಯದ ಹೂವುಗಳನ್ನು ಧರಿಸಿದ್ದೆ ಎಂದು ನವ್ಯಾ ತಮಾಷೆ ಮಾಡಿದ್ದು,ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.ಆಸ್ಟ್ರೇಲಿಯಾ ಪ್ರವಾಸಕ್ಕೆ ಹೊರಡುವ ಮೊದಲು ತನ್ನ ತಂದೆ ಉಡುಗೊರೆಯಾಗಿ ನೀಡಿದ 15 ಸೆಂ.ಮೀ ಉದ್ದದ ಮಲ್ಲಿಗೆ ಹೂವಿನ ಹಾರವನ್ನು ತೆಗೆದುಕೊಂಡು ಹೋಗಿದ್ದೆ. ಆ ದೇಶದ ನಿಯಮಗಳ ಅರಿವಿಲ್ಲದೆ ವಿಮಾನ ನಿಲ್ದಾಣದ ಫಾರಂನಲ್ಲಿ ಮಲ್ಲಿಗೆ ಹೂ ತೆಗೆದುಕೊಂಡು ಹೋಗುವ ಬಗ್ಗೆ ಯಾವುದೇ ಘೋಷಣೆ ಮಾಡಿರಲಿಲ್ಲ. ಇದು ದಂಡಕ್ಕೆ ಕಾರಣವಾಯಿತು ಎಂದು ತಿಳಿಸಿದ್ದಾರೆ.ದೇಶದ ಸ್ಥಳೀಯ ಸಸ್ಯ ಮತ್ತು ಪ್ರಾಣಿಗಳನ್ನು ರಕ್ಷಿಸಲು ಆಸ್ಟ್ರೇಲಿಯಾದಲ್ಲಿ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ.ವಿದೇಶಿ ಸಸ್ಯಗಳು ಅಥವಾ ಪ್ರಾಣಿಗಳನ್ನು ಆ ದೇಶಕ್ಕೆ ಕೊಂಡೊಯ್ಯುವುದು ಅಪರಾಧ ಎಂದು ಪರಿಗಣಿಸಲಾಗುತ್ತದೆ ಏಕೆಂದರೆ ಇದು ಸ್ಥಳೀಯ ಪ್ರಭೇದಗಳಿಗೆ ಅಪಾಯವನ್ನುಂಟುಮಾಡುತ್ತದೆ. ಆಸ್ಟ್ರೇಲಿಯ ಸರ್ಕಾರದ ಕೃಷಿ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆಯ ಪ್ರಕಾರ, ಅಂತಹ ವಿದೇಶಿ ಸಸ್ಯ ಅಥವಾ ಪ್ರಾಣಿಗಳನ್ನು ಸರಿಯಾದ ಘೋಷಣೆ ಮತ್ತು ತಪಾಸಣೆಯ ನಂತರ ಮಾತ್ರ ದೇಶಕ್ಕೆ ತರಬೇಕು. 28 ದಿನಗಳಲ್ಲಿ ದಂಡ ಪಾವತಿಸುವಂತೆ ನಟಿಗೆ ಸೂಚಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







