ಪೋಷಕರೇ ನಿಮಗೊಂದು ಸಿಹಿ ಸುದ್ದಿ; ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಶುಲ್ಕ ಸಂಪೂರ್ಣ ವಿನಾಯಿತಿ
ಟಿಒಬಿ ನ್ಯೂಸ್ ಬೆಂಗಳೂರು
ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ನಿಟ್ಟೆ ವಿಶ್ವವಿದ್ಯಾಲಯವು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಸಂಪೂರ್ಣ ಬೋಧನಾ ಶುಲ್ಕ ವಿನಾಯಿತಿ ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳು ಉಚಿತವಾಗಿ ಇಂಜಿನಿಯರಿಂಗ್ ಶಿಕ್ಷಣ ಪಡೆಯುವ ಅವಕಾಶ ಹೊಂದಿದ್ದಾರೆ.
2025ರ NIRF ರ‍್ಯಾಂಕಿಂಗ್‌ನಲ್ಲಿ 80ನೇ ಸ್ಥಾನ ಪಡೆದಿರುವ ನಿಟ್ಟೆ ವಿಶ್ವವಿದ್ಯಾಲಯವು ಮಂಗಳೂರು, ನಿಟ್ಟೆ ಹಾಗೂ ಬೆಂಗಳೂರು ಸೇರಿ ಮೂರು ಸುಸಜ್ಜಿತ ಕ್ಯಾಂಪಸ್‌ಗಳನ್ನು ಹೊಂದಿದೆ. ಮೆಡಿಕಲ್, ಡೆಂಟಲ್, ಫಾರ್ಮಸಿ, ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಹಾಸ್ಪಿಟಾಲಿಟಿ ಮತ್ತು ಮೀಡಿಯಾ ಸೇರಿದಂತೆ 160ಕ್ಕೂ ಹೆಚ್ಚು ಕೋರ್ಸ್‌ಗಳನ್ನು ಇಲ್ಲಿ ಒದಗಿಸಲಾಗುತ್ತಿದೆ.
ಗುಣಮಟ್ಟದ ಶಿಕ್ಷಣ, ಶಿಸ್ತಿನ ವಾತಾವರಣ, ನೈತಿಕ ಮೌಲ್ಯಗಳು, ಆಧುನಿಕ ಪ್ರಯೋಗಾಲಯಗಳು, ಸಮೃದ್ಧ ಗ್ರಂಥಾಲಯ, ಉತ್ತಮ ಹಾಸ್ಟೆಲ್ ಹಾಗೂ ಕ್ರೀಡಾ ಸೌಲಭ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕವಾಗಿವೆ.
ನಿಟ್ಟೆಯ NMAM ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NMAMIT)ಯಲ್ಲಿ ಪ್ರಮುಖ ಜಾಗತಿಕ ಕಂಪನಿಗಳ ಸಹಯೋಗದೊಂದಿಗೆ 6 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳಲ್ಲಿ ಕಂಪನಿಗಳ ತಜ್ಞರಿಂದಲೇ ವಿದ್ಯಾರ್ಥಿಗಳಿಗೆ ನೇರ ಪ್ರಾಯೋಗಿಕ ತರಬೇತಿ ಮತ್ತು ಸಂಶೋಧನಾ ಅವಕಾಶಗಳು ಲಭ್ಯವಾಗುತ್ತವೆ
ಪ್ರತಿ ವರ್ಷ 400ಕ್ಕೂ ಹೆಚ್ಚು ಸಂಸ್ಥೆಗಳು ಕ್ಯಾಂಪಸ್ ನೇಮಕಾತಿಯಲ್ಲಿ ಭಾಗವಹಿಸುತ್ತಿದ್ದು, 90 ಶೇಕಡಕ್ಕೂ ಅಧಿಕ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಯಶಸ್ವಿಯಾಗಿ ಉದ್ಯೋಗ ಪಡೆಯುತ್ತಿದ್ದಾರೆ. ವಿಶೇಷವಾಗಿ, ಇದುವರೆಗೆ 35 ಜಪಾನೀಸ್ ಕಂಪನಿಗಳಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉದ್ಯೋಗ ಪಡೆದಿರುವುದು ಗಮನಾರ್ಹವಾಗಿದೆ.
ಶುಲ್ಕ ವಿನಾಯಿತಿ ಯೋಜನೆಯಡಿ ನಿಟ್ಟೆಯ ಎರಡು ಪ್ರಮುಖ ಇಂಜಿನಿಯರಿಂಗ್ ಕಾಲೇಜುಗಳಾದ NMAMIT, ನಿಟ್ಟೆ ಹಾಗೂ NMIT, ಬೆಂಗಳೂರುಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು apply.nitte.edu.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಸಹಾಯವಾಣಿ ಸಂಖ್ಯೆ: 95131 88844 ಸಂಪರ್ಕಿಸಬಹುದೆಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.
