ನವದೆಹಲಿ: ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ಆಡಳಿತಾರೂಢ ಎನ್ಡಿಎ ಮೈತ್ರಿಕೂಟ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ. ರಾಧಾಕೃಷ್ಣನ್ ಅವರು 452 ಮತಗಳ ಪಡೆದು ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿರುವ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಅವರು ಘೋಷಣೆ ಮಾಡಿದ್ದಾರೆ. ಮತ್ತೊಂದೆಡೆ ವಿರೋಧ ಪಕ್ಷಗಳ ಮೈತ್ರಿಕೂಟವು ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರು 300 ಮತ ಪಡೆದಿದ್ದಾರೆ.ಜಗದೀಪ್ ಧನಕರ್ ಅವರ ಹಠಾತ್ ರಾಜೀನಾಮೆಯಿಂದಾಗಿ ಅನಿವಾರ್ಯವಾದ ಚುನಾವಣೆಯಲ್ಲಿ ಸಿ.ಪಿ. ರಾಧಾಕೃಷ್ಣನ್ ಅವರು ಸುದರ್ಶನ್ ರೆಡ್ಡಿ ಅವರನ್ನು 152 ಮತಗಳಿಂದ ಸೋಲಿಸಿದರು. ಮುಂದುವರೆದು, ರಾಧಾಕೃಷ್ಣನ್ ಅವರು ಸೆಪ್ಟೆಂಬರ್ 12 ರಂದು ಭಾರತದ ಹದಿನೈದನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಇದರೊಂದಿಗೆ ಅವರು ರಾಜ್ಯಸಭಾ ಅಧ್ಯಕ್ಷ ಹುದ್ದೆಯ ಜವಾಬ್ದಾರಿಯನ್ನು ಸಹ ವಹಿಸಿಕೊಳ್ಳಲಿದ್ದಾರೆ.ಇನ್ನು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ಅವರ ಮಧ್ಯೆ ನೇರ ಸ್ಪರ್ಧೆ ನಡೆದಿತ್ತು.ಉಪರಾಷ್ಟ್ರಪತಿ ಚುನಾವಣೆಗೆ 14 ಸಂಸದರು ಗೈರು ಹಾಜರಾಗಿದ್ದು 767 ಸಂಸದರು ಮತ ಚಲಾಯಿಸಿದ್ದರು. ರಾಧಾಕೃಷ್ಣನ್ 452 ಮತಗಳನ್ನು ಪಡೆದರೆ, ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದರು. 15 ಮತಗಳನ್ನು ಅಮಾನ್ಯವೆಂದು ಘೋಷಿಸಲಾಯಿತು ಮತ್ತು 13 ಸಂಸದರು ಅಡ್ಡ ಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







