ನವದೆಹಲಿ: ಧಾರ್ಮಿಕ ಸ್ಥಳಗಳ ಮೇಲೆ ದಾಳಿ ಮಾಡಲು ಉಗ್ರರು ಯೋಜನೆ ರೂಪಿಸಿದ್ದರು ಎನ್ನುವ ಮಾಹಿತಿಯನ್ನು ಎನ್ಐಎ ಅಧಿಕಾರಿಗಳು ನೀಡಿದ್ದಾರೆ. ಶಸ್ತ್ರಾಸ್ತ್ರಗಳು ಹಾಗೂ ಬಾಂಬ್ ಮೂಲಕ ಧಾರ್ಮಿಕ ಸ್ಥಳಗಳ ಮೇಲೆ ದೊಡ್ಡ ದಾಳಿಯನ್ನೇ ನಡೆಸಲು ಉಗ್ರರು ಸಿದ್ಧತೆ ನಡೆಸಿದ್ದರು. ಆದರೆ ಎನ್ಐಎ ಅವರ ಉಪಾಯವನ್ನು ಬುಡಮೇಲು ಮಾಡಿದ್ದಾರೆ.ಐಸಿಸ್ ಮಾಡ್ಯೂಲ್ಗಳನ್ನು ಭೇದಿಸಿದ್ದಾರೆ. ಪಾಕಿಸ್ತಾನಿ ಭಯೋತ್ಪಾದಕರೊಂದಿಗೆ ಸಂಪರ್ಕಿಸುವ ಡಿಜಿಟಲ್ ಪುರಾವೆಗಳನ್ನು ತನಿಖಾಧಿಕಾರಿಗಳು ಕಂಡುಕೊಂಡಿದ್ದಾರೆ.ಎರಡೂ ಮಾಡ್ಯೂಲ್ಗಳು ಖಿಲಾಫತ್ ಮಾದರಿ ಮತ್ತು ಘಜ್ವಾ-ಎ-ಹಿಂದ್ ಕಾರ್ಯಸೂಚಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದವು ಎಂದು ವರದಿಯಾಗಿದೆ. ಮೊದಲ ಮಾಡ್ಯೂಲ್ ಅನ್ನು ದೆಹಲಿ ಪೊಲೀಸ್ ವಿಶೇಷ ದಳವು ಜಾರ್ಖಂಡ್, ತೆಲಂಗಾಣ, ಬೆಂಗಳೂರು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಗಳಲ್ಲಿ ನಡೆಸಿದ ದಾಳಿಗಳಲ್ಲಿ ಪತ್ತೆಹಚ್ಚಿತು.ಈ ಘಟಕದ ಐದು ಸದಸ್ಯರಾದ ಅಶರ್ ದಾನಿಶ್, ಅಫ್ತಾಬ್ ಖುರೇಷಿ, ಸುಫಿಯಾನ್ ಅಬುಬಕರ್ ಖಾನ್, ಮೊಹಮ್ಮದ್ ಹುಜೈಫ್ ಯಮನ್ ಮತ್ತು ಕಮ್ರಾನ್ ಕಮ್ರಾನ್ ಖುರೇಷಿಯನ್ನು ಬಂಧಿತರಾಗಿದ್ದಾರೆ. ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ರಾಸಾಯನಿಕ ಬಾಂಬ್ ತಯಾರಿಸುವ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಧಾರ್ಮಿಕ ಸ್ಥಳಗಳ ಮೇಲೆ ಹತ್ಯೆಗಳು ಮತ್ತು ದಾಳಿಗಳನ್ನು ಭಯೋತ್ಪಾದಕರು ಯೋಜಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಎರಡನೇ ಐಸಿಸ್ ಮಾಡ್ಯೂಲ್ ಆಂಧ್ರಪ್ರದೇಶದ ವಿಜಯನಗರದಲ್ಲಿತ್ತು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಜಾರ್ಖಂಡ್, ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ ಮತ್ತು ದೆಹಲಿ ಸೇರಿದಂತೆ ಎಂಟು ರಾಜ್ಯಗಳಲ್ಲಿ 16 ಸ್ಥಳಗಳ ಮೇಲೆ ದಾಳಿ ನಡೆಸಿ, ದೊಡ್ಡ ಪ್ರಮಾಣದ ಡಿಜಿಟಲ್ ಸಾಧನಗಳು, ದಾಖಲೆಗಳು ಮತ್ತು ರಾಸಾಯನಿಕ ಬಾಂಬ್ ತಯಾರಿಸುವ ವಸ್ತುಗಳನ್ನು ವಶಪಡಿಸಿಕೊಂಡಿದೆ.ಸಿರಾಜ್ ಮತ್ತು ಸಮೀರ್ ಎಂಬ ಇಬ್ಬರು ಶಂಕಿತ ಭಯೋತ್ಪಾದಕರು ಇನ್ಸ್ಟಾಗ್ರಾಮ್, ಫೇಸ್ಬುಕ್, ಟೆಲಿಗ್ರಾಮ್, ಸಿಗ್ನಲ್ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಯುವಕರನ್ನು ಪ್ರಚೋದಿಸಿದ್ದಾರೆ ಎಂದು ಡಿಜಿಟಲ್ ಪುರಾವೆಗಳು ಬಹಿರಂಗಪಡಿಸಿವೆ. ಪಾಕಿಸ್ತಾನಿ ನಿರ್ವಾಹಕನೊಬ್ಬ ಈ ಗುಂಪುಗಳಲ್ಲಿರುವ ಮೂಲಭೂತವಾದಿಗಳ ವೀಡಿಯೊಗಳನ್ನು ಹಂಚಿಕೊಂಡಿದ್ದಾನೆ. ವಿಜಯನಗರದಲ್ಲಿ ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಂಧಿಸಲಾಗಿದೆ.ಈ ಪ್ರಕರಣದ ಮೊದಲ ಆರೋಪಿ ಆರಿಫ್ ಹುಸೇನ್ ಅಲಿಯಾಸ್ ಅಬು ತಾಲಿಬ್ ಆಗಸ್ಟ್ 27 ರಂದು ಸೌದಿ ಅರೇಬಿಯಾದ ರಿಯಾದ್ಗೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಬಂಧಿಸಲಾಯಿತು. ತನಿಖೆಯಲ್ಲಿ ಆತ ಮತ್ತು ಆತನ ಸಹಚರರು ನೇಪಾಳ ಗಡಿಯ ಮೂಲಕ ಶಸ್ತ್ರಾಸ್ತ್ರಗಳನ್ನು ಪೂರೈಸಲು ಸಂಚು ರೂಪಿಸುತ್ತಿದ್ದರು ಎಂದು ತಿಳಿದುಬಂದಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







