ಬೆಂಗಳೂರು: ಪ್ರಾದೇಶಿಕ ಪಕ್ಷ ಕಟ್ಟುವುದೆಂದರೆ ಯಾರೋ ಗೆದ್ದ ಕಪ್ ಹಿಡಿದು ಮುತ್ತು ಕೊಟ್ಟು ರೀಲ್ಸ್ ಮಾಡಿದಷ್ಟು ಸುಲಭವಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಈಗ ಕಾಂಗ್ರೆಸ್ ಕಾಲ, ಜೆಡಿಎಸ್ ನಾಯಕರು ಸಮಯ ವ್ಯರ್ಥ ಮಾಡಬೇಡಿ ಕಾಂಗ್ರೆಸ್ ಬನ್ನಿ ಎಂದು ಮದ್ದೂರಿನಲ್ಲಿ ಡಿ.ಕೆ.ಶಿವಕುಮಾರ್ ಕರೆ ಕೊಟ್ಟಿದ್ದಕ್ಕೆ ನಿಖಿಲ್ ತಿರುಗೇಟು ನೀಡಿದ್ದು, ಜನತಾದಳದ
ಕಾರ್ಯಕರ್ತರು ನಿಷ್ಠಾವಂತರು
ಗ್ಯಾರಂಟಿ ಅನುಷ್ಠಾನ ಸಮಿತಿ ಹೆಸರಿನಲ್ಲಿ ರಾಜ್ಯದ ಜನರ ತೆರಿಗೆ ಹಣದಲ್ಲಿ ಗೌರವಧನ ಪಡೆಯುತ್ತಿರುವ ಗಂಜಿ ಗಿರಾಕಿ ಕಾಂಗ್ರೆಸ್ ಕಾರ್ಯಕರ್ತರಲ್ಲ ಎಂದು ತಿವಿದಿದ್ದಾರೆ. ಪ್ರಾದೇಶಿಕ ಪಕ್ಷ ಕಟ್ಟುವುದು, ಯಾರೋ ಗೆದ್ದ ಕಪ್ ಹಿಡಿದು ಮುತ್ತಿಟ್ಟು, ರೀಲ್ಡ್ ಮಾಡುವಷ್ಟು ಸುಲಭವಲ್ಲ ಎಂದು ಕಿಡಿಕಾರಿದ್ದಾರೆ. ಅಧಿಕಾರಕ್ಕೆ ಬಂದು 2 ವರ್ಷ ಕಳೆದ್ರೂ ಕಾರ್ಯಕರ್ತರಿಗೆ ಅಧಿಕಾರ ಕೊಡಲು ಯೋಗ್ಯತೆ ಇಲ್ಲದವರು ನಮ್ಮ ಕಾರ್ಯಕರ್ತರನ್ನು ಪಕ್ಷಕ್ಕೆ ಕರೆಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



