ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳು ಭಾರೀ ಮಳೆಯಾಗುವ (Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.ಸೆಪ್ಟೆಂಬರ್ 16 ಮತ್ತು 17ರಂದು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದೆ.ಇನ್ನು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸೆ.18 ರಂದು ಕರಾವಳಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಸೆ. 19 ರಿಂದ 22ರ ವರೆಗೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







