ಮೊಳಕಾಲ್ಮುರು: ನನಗೆ ಒಂದು ಊರಲ್ಲ ಎಷ್ಟು ಊರುಗಳನ್ನು ನೋಡಿದ್ದೇನೆ. ನಾನು ರಿಮೋಟ್ ಇದ್ದಂಗೆ ಕುಂತಲ್ಲೇ ಅಧಿಕಾರಿಗಳನ್ನು ಆಫ್ ,ಅನ್ ಮಾಡ್ತೀನಿ ಎಂದು ಮೊಳಕಾಲ್ಮುರು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ರು.
ತಳಕು ಹೋಬಳಿಯಲ್ಲಿ ಸುಮಾರು 8 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರೆವೇರಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕುಂತುಕೊಂಡು ಕೆಲಸ ಮಾಡೋ ರಿಮೋಟ್ ಇದ್ದಂಗೆ ನಾನು. ಟಿವಿ ಅಲ್ಲ. ನಾನು ಪ್ರಪಂಚ ಸುತ್ತಿದ ವೀರ ನಾನು. ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಅಧಿಕಾರಿಗಳು ಕ್ಷೇತ್ರದಲ್ಲಿ ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಬೇಡರೆಡ್ಡಿಹಳ್ಳಿ ಗ್ರಾಮದ ರಸ್ತೆಯು ಗೌರಸಮುದ್ರ ಮತ್ತು ಕೊಂಡ್ಲಹಳ್ಳಿ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಕಳೆದ ವರ್ಷ ಸುರಿದ ಭಾರಿ ಮಳೆಗೆ ಹಲವು ರಸ್ತೆಗಳು ಹಾಳಾಗಿವೆ. ಆದ್ದರಿಂದ ಸುಮಾರು8 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ದಾಸರೆಡ್ಡಿ, ಸೂರನಾಯಕ, ಪ್ರಭುಸ್ವಾಮಿ, ಬಂಡೆ ಕಪಿಲೆ ಓಬಣ್ಣ, ತಳಕು ಮತ್ತು ನಾಯಕನಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಪಿ. ನಾಗೇಶ್ ರೆಡ್ಡಿ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಜಿ ತಿಪ್ಪೇಸ್ವಾಮಿ, ಕೆಡಿಪಿ ಸದಸ್ಯ ಎಸ್ ಬಿ ವಿಶ್ವನಾಥ್ ರೆಡ್ಡಿ, ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಅರುಣ್ ಕುಮಾರ್, ಸದಸ್ಯರಾದ ವೇಣುಗೋಪಾಲ್ ರೆಡ್ಡಿ, ತಿಮ್ಮಯ್ಯ, ಯಲ್ಲಮ್ಮ, ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಸದಸ್ಯ ಜೆ.ಆರ್. ರವಿಕುಮಾರ್, ವಕೀಲ ಉಮಾಪತಿ ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಆರ್ ಶ್ರೀಕಾಂತ್, ವರವು ಕಾಟಯ್ಯ, ಐ.ಎನ್.ಟಿ.ಯು.ಸಿ. ಅಧ್ಯಕ್ಷ ಯಾದಲಗಟ್ಟೆ ಪಾಲಯ್ಯ, ಪರಿಶಿಷ್ಟ ಪಂಗಡ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಪಿ. ಹೇಮಣ್ಣಕಾಲುವೇಹಳ್ಳಿ, ಜೋಗಿಹಟ್ಟಿ ವೆಂಕಟೇಶ್ ಇದ್ದರೂ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



