ಚಿತ್ರದುರ್ಗ: ರಾಜ್ಯ ಮಟ್ಟದ ಕುಳುವ ಜನಾಂಗದ ಸಮಾವೇಶ ಹಾಗೂ ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯನವರ 918ನೇಜಯಂತ್ರ್ಯೋತ್ಸವ ಆಗಸ್ಟ್ 23ರಂದು ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 2ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದುಚಿತ್ರದುರ್ಗ ಜಿಲ್ಲಾ ಕೊರಮ ಜನಾಂಗದ ಕ್ಷೇಮಾಭಿವೃದ್ದಿ ಸಂಘದ ಗೌರವಾಧ್ಯಕ್ಷರಾದ ಹನುಮಂತಪ್ಪ ಗುಡೇರಿ,ಅಧ್ಯಕ್ಷರಾದಕೆ.ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ದ್ವಾರಕನಾಥ್ ತಿಳಿಸಿದ್ದಾರೆ.ರಾಜ್ಯದಲ್ಲಿ ಅಲೆಮಾರಿ ಪರಿಶಿಷ್ಟ ಜಾತಿಗೆ ಸೇರುವ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕ ರಾಜಕೀಯವಾಗಿ ಅತ್ಯಂತಹಿಂದುಳಿದ, ಅಸಂಘಟಿತ ಮತ್ತು ಶೋಷಣೆಗೊಳಗಾದ ಜನಾಂಗವೇ ಕುಳುವ. (ಕೊರಮ, ಕೊರವ, ಕೊರವಂಜಿ). ಸಾಮಾಜಿಕನ್ಯಾಯ ಮತ್ತು ಉತ್ತಮ ಶಿಕ್ಷಣ, ಉದ್ಯೋಗ, ರಾಜಕೀಯ ಪ್ರಾತಿನಿದ್ಯ ಮತ್ತು ಸರ್ಕಾರಿ ಸೌಲಭ್ಯ ರೀತಿಯಲ್ಲಿ ಸಿಗದೆ ಅನ್ಯಾಯಕ್ಕೆಒಳಪಟ್ಟು ಅನೇಕ ಕುಂದು-ಕೊರತೆಗಳಿಂದ ಕೂಡಿದ ಈ ಜನಾಂಗವು ಹಿಂದಿನವರೆಗೆ ಬಡತನದ ಬಂಧನದಲ್ಲಿ ಸಿಲುಕಿದೆ. ಎಲ್ಲಾರಾಜಕೀಯ ಪಕ್ಷಗಳು, ಈ ಜನಾಂಗಕ್ಕೆ ರಾಜಕೀಯ ಪ್ರಾತಿನಿದ್ಯ ನೀಡದೆ ದೊಡ್ಡಮಟ್ಟದಲ್ಲಿ ಅನ್ಯಾಯವೆಸಗಿವೆ. ಈ ಎಲ್ಲಾಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನಮ್ಮ ಸಮಾಜದ ಬೇಡಿಕೆಗಳನ್ನು ಈ ಸರ್ಕಾರದ ಮುಂದೆ ಇಡಲು ಈ ವೇದಿಕೆಸಾಕ್ಷಿಯಾಗಲಿದೆ ಎಂದಿದ್ದಾರೆ.
ಆ.23ರ ಶನಿವಾರ ಮಧ್ಯಾಹ್ನ 2 ಗಂಟೆಗೆ ನಡೆಯುವ ಜನಾಂಗದ ಸಮಾವೇಶ ಹಾಗೂ ಜಯಂತ್ಯೋತ್ಸವದ ದಿವ್ಯ ಸಾನೀಧ್ಯವನ್ನುದಾವಣಗೆರೆ ವಿರಕ್ತಮಠದ ಡಾ.ಶ್ರೀ ಬಸವಪ್ರಭು ಶ್ರೀಗಳು ಹಾಗೂ ಮಸ್ಕಿ ತಾಲ್ಲೂಕಿನ ಇರಕಲ್ ಮಠದ ಜಗದ್ಗುರು ಶ್ರೀ ಶಿವಶಕ್ತಿಪೀಠದ ಶ್ರೀ ಬಸವಪ್ರಸಾದ ಶ್ರೀಗಳು ವಹಿಸಲಿದ್ದಾರೆ.ಕಾರ್ಯಕ್ರಮವನ್ನು ಹಿಂದುಳಿದ ವರ್ಗ ಹಾಗೂ ಕನ್ನಡ ಸಂಸ್ಕøತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಹಾಗೂ ಯೋಜನಾಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ರ ನೇರವೇರಿಸಲಿದ್ದಾರೆ. ಸಂಸದರಾದ ಗೋವಿಂದಕಾರಜೋಳ, ಶಾಸಕರಾದ ಕೆ.ಸಿ.ವಿರೇಂದ್ರ ಪಪ್ಪಿ, ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ ಗೋಪಾಲಕೃಷ್ಣ,ಡಾ.ಎಂ.ಚಂದ್ರಪ್ಪ, ಮಾಜಿ ಸಂಸದರಾದ ಬಿಎನ್.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಮಾಜಿ ಶಾಶಕರಾದಜಿ.ಎಚ್.ತಿಪ್ಪಾರೆಡ್ಡಿ, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಸುವಿತಾ ರಘು, ನಗರಾಭೀವೃದ್ದಿ ಪ್ರಾಧಿಕಾರದ ಆಧ್ಯಕ್ಷರಾದ ತಾಜ್ ಪೀರ್,ಆದಿ ಜಾಂಭವ ನಿಗಮದ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್, ದ್ರಾಕ್ಷರಸ ಅಭೀವೃದ್ದಿ ನಿಗಮದ ಅಧ್ಯಕ್ಷರಾದ ಯೋಗಿಶ್ ಬಾಬು
ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿತ್ರದುರ್ಗ ಜಿಲ್ಲಾ ಕೊರಮ ಜನಾಂಗದ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ಕೆ.ಕೃಷ್ಣಪ್ಪವಹಿಸಲಿದ್ದಾರೆ.
ರಾಜ್ಯ ಮಟ್ಟದ ಕುಳುವ ಜನಾಂಗದ ಸಮಾವೇಶ ಹಾಗೂ ಕಾಯಕಯೋಗಿ ಶಿವಶರಣ ಶ್ರೀ ನುಲಿಯ ಚಂದಯ್ಯನವರ 918ನೇ
ಜಯಂತ್ರ್ಯೋತ್ಸವದ ಅಂಗವಾಗಿ ಆ. 23ರ ಬೆಳ್ಳಿಗೆ 8.30ಕ್ಕೆ ನಗರದ ನೀಲಕಂಠೇಶ್ವರ ದೇವಾಲಯದಿಂದ ಕುಲಗುರುಗಳಾದ
ಶರಣರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ನಗರದ ಶ್ರೀ ನೀಲಕಂಠೇಶ್ವರ ದೇವಸ್ಥಾನದಿಂದ ಬಿ.ಡಿ. ರಸ್ತೆ ಮುಖಾಂತರ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದ ಮೂಲಕ ಗಾಯತ್ರಿ ಕಲ್ಯಾಣ ಮಂಟಪವನ್ನು ತಲುಪಲಿದೆ. ಇದರಲ್ಲಿ ವಿವಿಧ ಜಾನಪದ ಕಲಾತಂಡಗಳು,ಭಾಗವಹಿಸಲಿದ್ದು ಇದನ್ನು ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ಎಂ.ಭಜಂತ್ರಿ ಹಾಗೂ ಮಾಜಿಶಾಸಕರಾದ ಜಿ.ಚಂದ್ರಣ್ಣ ಉದ್ಘಾಟಿಸಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







