ಚಿತ್ರದುರ್ಗ: ಸದ್ಗುರು ಕಬೀರಾನಂದಾಶ್ರಮ ಹಾಗೂ ಕುಂಬಾರ ಗುಂಡಯ್ಯ ಮಹಾ ಸಂಸ್ಥಾನ ಚಿತ್ರದುರ್ಗ ಇವರ ಸಹಯೋಗದೊಂದಿಗೆಆಗಸ್ಟ್ 24ರಂದು ನಗರದ ಕಬೀರಾನಂದ ಆಶ್ರಮದಲ್ಲಿ ಬೆಳಿಗ್ಗೆ 10.30ಕ್ಕೆ ನಮ್ಮ ಮಕ್ಕಳ ಭವಿಷ್ಯದ ದೃಷ್ಟಿಯಿಂದಟಿ.ಎನ್.ಚಿಕ್ಕ ವೀರಯ್ಯರವರ ಮೊಬೈಲ್ ಬಿಡಿ, ಪುಸ್ತಕ ಹಿಡಿ ಅರಿವಿನ ಅಭಿಯಾನ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆಎಂದು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಂಜಾಚಿ ಗೀತಾ ಭರಮಸಾಗರ ತಿಳಿಸಿದ್ದಾರೆ.ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ಸದ್ಗುರು ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಶ್ರೀಗಳು ಹಾಗೂ ಕುಂಬಾರ ಗುಂಡಯ್ಯ ಮಹಾ ಸಂಸ್ಥಾನದ ಸಿ.ಸಿ.ಬಸವಮೂರ್ತಿ ಕುಂಬಾರ ಗುಂಡಯ್ಯ ಶ್ರೀಗಳು ವಹಿಸಲಿದ್ದಾರೆ. ಈ ಸಂವಾದಲ್ಲಿಟಿ.ಎನ್.ಚಿಕ್ಕವೀರಯ್ಯರವರು ಭಾಗವಹಿಲಿದ್ದಾರೆ ಎಂದು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







