ಬೆಂಗಳೂರು: ಆನ್ ಲೈನ್ ವಂಚನೆ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ರಾಜ್ಯದಲ್ಲಿ 43 ಪೊಲೀಸ್ ಠಾಣೆಗಳನ್ನು ಸೈಬರ್ ಅಪರಾಧ ಪೊಲೀಸ್ ಠಾಣೆಗಳೆಂದು ಮರು ಪದನಾಮೀಕರಿಸಿ ಅದೇಶಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರುವಿಧಾನ ಪರಿಷತ್ ಸದಸ್ಯರಾದ ಎಸ್.ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸೈಬರ್ ಕ್ರೈಮ್ ಠಾಣೆಗಳಿಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲು ಅಧಿಕಾರ ನೀಡಿ ವ್ಯಾಪ್ತಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿದೆ.ರಾಜ್ಯದಲ್ಲಿ ಡಿಜಿಪಿ ಸೈಬರ್ ಕಮಾಂಡ್ ಹುದ್ದೆ ಸೃಜಿಸಲಾಗಿದೆ. ಸಿಐಡಿ ಯಲ್ಲಿ ಸೈಬರ್ ಕ್ರೈಮ್ ವಿಭಾಗವು ರಾಜ್ಯದ ಸೈಬರ್ ಅಪರಾಧ ತನಿಖೆಗೆ ಕೇಂದ್ರ ಕಚೇರಿಯಾಗಿರುತ್ತದೆ. ಜೊತೆಗೆ ಡಿಜಿಟಲ್ ಫೊರೆನ್ಸಿಕ್ ಪ್ರಯೋಗಾಲಯವನ್ನು ಸಹ ಸ್ಥಾಪನೆ ಮಾಡಲಾಗಿದೆ. ಸೈಬರ್ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಆಧುನಿಕ ತಂತ್ರಜ್ಞಾನ ಹೊಂದಿರುವ ಉಪಕರಣಗಳನ್ನು ಬಳಸುತ್ತಿದ್ದು, ಆ ಸಂಬಂಧ ಸಿಬ್ಬಂದಿಗಳಿಗೆ ವಿಶೇಷ ತರಬೇತಿ ಒದಗಿಸಲಾಗುತ್ತಿದೆ. ಸಿಐಡಿ ಯ ಸೈಬರ್ ಫೊರೆನ್ಸಿಕ್ ಯುನಿಟ್ ವಿಭಾಗವು ರಾಜ್ಯದಲ್ಲಿ ದಾಖಲಾಗುವ ಸೈಬರ್ ಪ್ರಕರಣಗಳಿಗೆ ತಾಂತ್ರಿಕ ನೆರವು ನೀಡುತ್ತಾ ಬಂದಿದೆ ಎಂದು ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







