ಬೆಂಗಳೂರು: ಅರಣ್ಯ ಹಕ್ಕು ಕಾಯ್ದೆ ಅಡಿ ಅರಣ್ಯ ವಾಸಿಗಳು, ಬುಡಕಟ್ಟು ಸಮುದಾಯದವರು ಮತ್ತು ಸ್ಥಳೀಯರು ತಮ್ಮ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸಲು ಅವಕಾಶವಿದೆ. ಆದರೆ, ನೆರೆ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜಾನುವಾರುಗಳನ್ನು ತಂದು ರಾಜ್ಯದ ಅರಣ್ಯ ಪ್ರದೇಶದಲ್ಲಿ ಮೇಯಿಸಲು ಮಾತ್ರ ಕಡಿವಾಣ ಹಾಕಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.ಮೇವಿಗಾಗಿ ಅರಣ್ಯದೊಳಗೆ ಜಾನುವಾರುಗಳನ್ನು ಕಳುಹಿಸುವುದನ್ನು ನಿಷೇಧಿಸುವ ಆದೇಶ ಕುರಿತ ಗೊಂದಲಕ್ಕೆ ಸಂಬಂಧಿಸಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಈಶ್ವರ್ ಖಂಡ್ರೆ, ಮಲೆಮಹದೇಶ್ವರ ಬೆಟ್ಟ
ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಸುಮಾರು 33 ಸಾವಿರ ಜಾನುವಾರುಗಳಿವೆ ಎಂದು ಪಶುಸಂಗೋಪನಾ ಇಲಾಖೆಯ ಅಂಶದಿಂದ ಬಹಿರಂಗವಾಗಿದೆ. ಅದರಡಿ ಜಾನುವಾರುಗಳನ್ನು ಹೊಡೆದುಕೊಂಡು ಹೋದಾಗ ವನ್ಯ ಜೀವಿಗಳಿಗೆ ಕೊರತೆ, ನೀರಿನ ಕೊರತೆ ಎದುರಾಗುತ್ತದೆ. ಆ ಹಿನ್ನೆಲೆಯಲ್ಲಿ ಜಾನುವಾರುಗಳನ್ನು ಹಾಗೆ ಮೇವಿಗಾಗಿ ಬಿಡುವುದನ್ನು ನಿಷೇದಿಸಲು ಸೂಚಿಸಲಾಗಿದೆ. ಮದ್ರಾಸ್ ಹೈಕೋರ್ಟ್ ಆದೇಶದಂತೆ ತಮಿಳುನಾಡಿನ ಅರಣ್ಯಗಳಲ್ಲಿ ಜಾನುವಾರುಗಳನ್ನು ಮೇಯಿಸುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಅಲ್ಲಿನ ಸಾವಿರಾರು ಜಾನುವಾರುಗಳನ್ನು ನಮ್ಮ ಕಾಡಿನಲ್ಲಿ ಮೇಯಿಸಲಾಗುತ್ತಿದೆ ಎಂದಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



