ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಯನ್ನು ಕೋರ್ಟ್ ಆಗಸ್ಟ್ 28ರವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ. ಇಂದು ಬೆಳಿಗ್ಗೆ ಶಾಸಕರನ್ನು ಸಿಕ್ಕಿಂನಿಂದ ಬೆಂಗಳೂರಿಗೆ ಕರೆತರಲಾಗಿದ್ದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಡಿ ವಿಶೇಷ ತಂಡ ಶಾಸಕರನ್ನು ವಶಕ್ಕೆ ತೆಗೆದುಕೊಂಡಿದೆ. ವೀರೇಂದ್ರ ಪಪ್ಪಿ, ಆತನ ಸಹೋದರ ಮತ್ತು ಇತರರ ವಿರುದ್ಧ ಅಕ್ರಮ ಬೆಟ್ಟಿಂಗ್-ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದ ಭಾಗವಾಗಿ ಕೇಂದ್ರೀಯ ತನಿಖಾ ಸಂಸ್ಥೆಯು ಹಲವಾರು ರಾಜ್ಯಗಳಲ್ಲಿ ಶೋಧ ನಡೆಸಿತು. ಇನ್ನು ದಾಳಿ ವೇಳೆ ಪಪ್ಪಿ ಮನೆಯಲ್ಲಿ 1 ಕೋಟಿ ವಿದೇಶಿ ಕರೆನ್ಸಿ ಸೇರಿದಂತೆ 12 ಕೋಟಿ ರೂಪಾಯಿ ನಗದು, 6 ಕೋಟಿ ರೂ. ಮೌಲ್ಯದ ಚಿನ್ನಾಭರಣ, 10 ಕೆಜಿ ಬೆಳ್ಳಿ ಮತ್ತುನಾಲ್ಕುವಾಹನಗಳನ್ನುವಶಪಡಿಸಿಕೊಂಡಿರುವುದಾಗಿ ಕೇಂದ್ರದ ತನಿಖಾ ಸಂಸ್ಥೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







