ಚಿತ್ರದುರ್ಗ : ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಕಾಸವರಹಟ್ಟಿ ಕಾರ್ಯ ಕ್ಷೇತ್ರದ ದ್ಯಾಮವ್ವನಹಳ್ಳಿ
ಗ್ರಾಮಾಂತರ ಪ್ರೌಢಶಾಲೆ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ನಿರ್ಮಲ ಗಿಡ ನೆಟ್ಟು ಮಾತನಾಡಿ ಪರಿಸರ ಸಂರಕ್ಷಣೆ ಬಗ್ಗೆ ಚಿಕ್ಕಂದಿನಲ್ಲಿಯೇ
ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕಿದೆ.ಗಿಡ,ಮರಗಳ ನಾಶದಿಂದ ಪರಿಸರದಲ್ಲಿ ಅಸಮತೋಲನವುಂಟಾಗಿ ಸಕಾಲಕ್ಕೆ ಮಳೆ ಬೆಳೆಯಾಗುವುದಿಲ್ಲ. ಇದರಿಂದ ಸಕಲಜೀವರಾಶಿಗಳು ಪರಿತಪಿಸಬೇಕಾಗುತ್ತದೆ. ಹಾಗಾಗಿ ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪರಿಸರಕ್ಕೆ ಹಸಿರು ಕೊಡುಗೆಯನ್ನುನೀಡಬೇಕಿದೆ ಎಂದು ಹೇಳಿದರು.ಒಕ್ಕೂಟದ ಅಧ್ಯಕ್ಷೆ ಅಶ್ವಿನಿ, ಮುಖ್ಯೋಪಾಧ್ಯಾಯ ಮಹಾಂತೇಶ್, ಹರೀಶ್, ಕೃಷಿ ಮೇಲ್ವಿಚಾರಕ ಸುರೇಶ್ ಹಾಗೂ ಶಿಕ್ಷಕರು ಈಸಂದರ್ಭದಲ್ಲಿಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



