ಪುಣ್ಯಕ್ಷೇತ್ರ, ಭಕ್ತಿ ಕೇಂದ್ರವಾಗಿದ್ದ ಧರ್ಮಸ್ಥಳ ಇತ್ತೀಚೆಗೆ ಬೇರೆ ಬೇರೆ ಕಾರಣಕ್ಕೆ ಸುದ್ದಿಯಲ್ಲಿದೆ. ಧರ್ಮಸ್ಥಳದ ಘನತೆಯನ್ನು ಮಣ್ಣುಪಾಲು ಮಾಡುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದೀಗ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿದವರಿಗೆ ನೊಟೀಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದ ಚಿನ್ನಯ್ಯ ಎಂಬಾತನನ್ನು ಬಂಧಿಸಲಾಗಿದ್ದು, ವಿಚಾರಣೆ ಚಾಲ್ತಿಯಲ್ಲಿದೆ. ಇದರ ನಡುವೆ ನೆರೆಯ ರಾಜ್ಯದ ಉಪಮುಖ್ಯಮಂತ್ರಿ ಮತ್ತು ಸ್ಟಾರ್ ನಟ ಪವನ್ ಕಲ್ಯಾಣ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಸ್ಟಾರ್ ನಟರಾಗಿರುವ ಪವನ್ ಕಲ್ಯಾಣ್ ಅವರು ಸೆಪ್ಟೆಂಬರ್ 11 ರಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಧರ್ಮಸ್ಥಳದ ಪರವಾಗಿ ನಿಲುವು ಪ್ರಕಟಿಸಲೆಂದೇ ಪವನ್ ಕಲ್ಯಾಣ್ ಅವರು ಕರ್ನಾಟಕಕ್ಕೆ ಬರುತ್ತಿದ್ದಾರೆ. ಸೆಪ್ಟೆಂಬರ್ 11 ರಂದು ಸಂಜೆ ಐದು ಗಂಟೆ ವೇಳೆಗೆ ಪವನ್ ಕಲ್ಯಾಣ್ ಅವರು ಧರ್ಮಸ್ಥಳಕ್ಕೆ ಆಗಮಿಸಲಿದ್ದು, ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಪವನ್ ಕಲ್ಯಾಣ್ ಮಾಡಿಸಲಿದ್ದಾರೆ. ಅದೇ ದಿನ ದೇವಾಲಯದ ಮುಂಭಾಗ ಆರತಿ ಸೇವೆಯನ್ನು ಸಹ ಪವನ್ ಕಲ್ಯಾಣ್ ಮಾಡಲಿದ್ದಾರೆ. ಧರ್ಮಾಧಿಕಾರಿಯವರನ್ನು ಸಹ ಪವನ್ ಅವರು ಭೇಟಿ ಆಗುವ ಸಾಧ್ಯತೆ ಇದೆ.ಪವನ್ ಕಲ್ಯಾಣ್ ಅವರು ಜನಸೇನಾ ಪಕ್ಷದ ಸಂಸ್ಥಾಪಕರಾಗಿದ್ದು ಪ್ರಸ್ತುತ ಆಂಧ್ರದ ಟಿಡಿಪಿ ಹಾಗೂ ಬಿಜೆಪಿ ಜೊತೆ ಮೈತ್ರಿ ಸರ್ಕಾರದ ಭಾಗವಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದಲೂ ಹಿಂದೂಪರ ನಿಲುವು ಪ್ರಕಟಿಸುತ್ತಾ ಬಂದಿರುವ ಪವನ್ ಕಲ್ಯಾಣ್, ತಿರುಪತಿ ಪ್ರಸಾದದಲ್ಲಿ ದನದ ಕೊಬ್ಬು ಪತ್ತೆ ಆದಾಗಲೂ ಸಹ ತಿರುಪತಿಗೆ ಭೇಟಿ ನೀಡಿ ಅಲ್ಲಿ ಸ್ವಚ್ಛತೆ ಕಾರ್ಯದಲ್ಲಿ ಭಾಗಿಯಾಗಿದ್ದರು. ಅಲ್ಲದೆ ಬಹಿರಂಗ ಸಭೆಯಲ್ಲಿ ವೀರಾವೇಶದಿಂದ ತಾವೊಬ್ಬ ‘ಸನಾತನಿ ಹಿಂದೂ’ ಎಂದು ಹೇಳಿದ್ದರು.ಇದೀಗ ಧರ್ಮಸ್ಥಳ ಪ್ರಕರಣವು ಮಗ್ಗುಲು ತಿರುಗಿದ್ದು, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂಬ ಅಂಶಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದ್ದು, ಧರ್ಮಸ್ಥಳದ ವಿರುದ್ಧ ಆರೋಪ ಮಾಡಿದವರನ್ನು ಪೊಲೀಸರು ತನಿಖೆ ಮಾಡುತ್ತಿರುವ ಹೊತ್ತಿನಲ್ಲಿ ಪವನ್ ಕಲ್ಯಾಣ್, ಧರ್ಮಸ್ಥಳದ ಪರವಾಗಿ ನಿಲುವು ಪ್ರಕಟಿಸಲೆಂದು ಇದೀಗ ಧರ್ಮಸ್ಥಳಕ್ಕೆ ಬರುತ್ತಿದ್ದಾರೆ. ಈ ಹಿಂದೆ ಕರ್ನಾಟಕದ ಕೆಲ ರಾಜಕಾರಣಿಗಳು ಸಹ ಧರ್ಮಸ್ಥಳಕ್ಕೆ ಭೇಟಿ ನೀಡಿ ತಾವು ಕ್ಷೇತ್ರದ ಪರವಾಗಿರುವುದಾಗಿ ಹೇಳಿದ್ದರು. ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಇನ್ನೂ ಕೆಲವು ಬಿಜೆಪಿ ರಾಜಕಾರಣಿಗಳು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







