ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನುಅರ್ಜಿಯನ್ನು57ನೇಸೆಷನ್ಸ್ಕೋರ್ಟ್ವಜಾಗೊಳಿಸಿದೆ.ಚಿತ್ರದುರ್ಗದ ರೇಣುಕಾಸ್ವಾಮಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದನೆಂಬ ಕಾರಣಕ್ಕಾಗಿ, ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಅಪಹರಿಸಿ ಬೆಂಗಳೂರಿಗೆ ತಂದು, ಪಟ್ಟಣಗೆರೆಯಲ್ಲಿನ ಶೆಡ್ನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿಯಾಗಿದ್ದಾರೆ.ಇತ್ತೀಚಿಗೆ ನಟ ದರ್ಶನ್ ಅವರ ಆಪ್ತರಾದ ಪವಿತ್ರ ಗೌಡ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಅವರ ಪರ ವಾದಿಸಿದ ವಕೀಲ ಬಾಲನ್, ಸುಪ್ರೀಂಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ಪ್ರಶ್ನಿಸದಿದ್ದರೂ ಚಾರ್ಜ್ ಶೀಟ್ ಸಲ್ಲಿಕೆಯಲ್ಲಿ ತಾಂತ್ರಿಕ ದೋಷಗಳಿವೆ. ಸಿ ಆರ್ ಪಿ ಸಿ ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸದೆ BNSS ಅಡಿಯಲ್ಲಿ ಚಾರ್ಚ್ ಶೀಟ್ ಸಲ್ಲಿಸಿರುವುದರಿಂದ ಕಾನೂನು ಪ್ರಕಾರ ಅಮಾನ್ಯವಾಗಿದೆ. ಹೀಗಾಗಿ ಪವಿತ್ರಗೌಡಅವರಿಗೆಜಾಮೀನುನೀಡಬೇಕುಎಂದುವಾದಿಸಿದರು.ಆರೋಪಿ ಪರ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರಾಸಿಕ್ಯೂಷನ್ ವಕೀಲ ಸಚಿನ್, ಜಾಮೀನು ನೀಡದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.ವಾದ ವಿವಾದ ಆಲಿಸಿದ ನ್ಯಾಯಾಧೀಶರು, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ಎಲ್ಲಾ ಆರೋಪಿಗಳಿಗೆ ನೀಡಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು. ಕೂಡಲೇ ಆರೆಸ್ಟ್ ಮಾಡುವಂತೆ ಸೂಚಿಸಿತ್ತು. ತದನಂತರ ಆಗಸ್ಟ್ 14 ರಿಂದ ಪವಿತ್ರ ಗೌಡ ಮತ್ತೆ ಜೈಲು ಸೇರಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







