ಸಿರಿಗೆರೆ: ಹೊಸಕೆರೆ ಸಮೀಪದ ಹಳ್ಳದ బళి ಕಾರಿನಲ್ಲಿ ಅವಿತುಕೊಂಡು ದರೋಡೆಗೆ ಹೊಂಚು ಹಾಕಿದ್ದ ತಂಡವೊಂದನ್ನು ಸಿರಿಗೆರೆ ಪೊಲೀಸರು ಬಂಧಿಸಿದ್ದಾರೆ.ಗ್ರಾಮಸ್ಥರ ಸುಳಿವು ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ದರೋಡೆಗೆಂದು ಬಳಸಿದ ಕಾರು, ಅದರಲ್ಲಿ ಇದ್ದ ಮಾರಕಾ-ಸ್ತ್ರಗಳು ಮತ್ತು ಕಾರದ ಪುಡಿಯನ್ನು ವಶಕ್ಕೆ ಪಡೆದಿದ್ದಾರೆ.ತಂಡದಲ್ಲಿದ್ದ 5 ಜನರಲ್ಲಿ ಮೂವರು ಸಿಕ್ಕಿ ಬಿದ್ದಿದ್ದು, ಇಬ್ಬರುಪರಾರಿಯಾಗಿದ್ದಾರೆ.ಇವರು ಪ್ರಮುಖ ಅಡಿಕೆ ವ್ಯಾಪಾರಿಯೊಬ್ಬರು ಹಣ ಸಾಗಿಸುವ ಮಾಹಿತಿಯನ್ನು ತಿಳಿದುಕೊಂಡು ದರೋಡೆ ಮಾಡುವ ಉದ್ದೇಶಸಿರಿಗೆರೆ ಸಮೀಪ ದರೋಡೆಗೆ ಕಾದು ಕುಳಿತಿದ್ದ ದುಷ್ಕರ್ಮಿಗಳು ಹೊಂದಿದ್ದರು ಎನ್ನಲಾಗಿದೆ.ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಕಾರಿನ ಹಿಂಬದಿಯ ನಂಬರ್ ಪ್ಲೇಟ್‌ಗೆ ಸ್ಟಿಕರ್ ಮತ್ತು ಮುಂಭಾಗದ ಪ್ಲೇಟ್‌ಗೆ ಕೆಸರು ಮೆತ್ತಿ ನಂಬರ್ ಕಾಣದಂತೆ ಮಾಡಿದ್ದರು.ಸಿರಿಗೆರೆ ಪೊಲೀಸ್ ಠಾಣೆಗೆ ಚಿತ್ರದುರ್ಗ ಡಿವೈಎಸ್‌ಪಿ ದಿನಕರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



