Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ನಿತ್ಯ ಭವಿಷ್ಯ – 10/04/2026 (ಶುಕ್ರವಾರ)

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು

ದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ; ಶೇ. 86 ವಿದ್ಯಾರ್ಥಿಗಳು ಪಾಸ್ 

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಇನ್ನೂ ಬಾರದ ಬೆಳೆ ವಿಮೆ ; ಸಂಕಷ್ಟದಲ್ಲಿ ಅನ್ನದಾತ
ಜಿಲ್ಲಾ ಸುದ್ದಿ

ಇನ್ನೂ ಬಾರದ ಬೆಳೆ ವಿಮೆ ; ಸಂಕಷ್ಟದಲ್ಲಿ ಅನ್ನದಾತ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 8, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಇನ್ನೂ ಬಾರದ ಬೆಳೆ ವಿಮೆ ; ಸಂಕಷ್ಟದಲ್ಲಿ ಅನ್ನದಾತ

ಚಳ್ಳಕೆರೆ: ತಾಲ್ಲೂಕಿನ ಸಾವಿರಾರು ಶೇಂಗಾ ಬೆಳೆಗಾರರಿಗೆ ಇನ್ನೂ ಬೆಳೆ ವಿಮೆ ಪರಿಹಾರ ಹಣ ದೊರೆಯದೇ ಸಂಕಷ್ಟ ಮುಂದುವರಿದಿರುವ ಹಿನ್ನೆಲೆಯಲ್ಲಿ, ತಕ್ಷಣ ವಿಮೆ ಹಣ ಮಂಜೂರು ಮಾಡಿಸಬೇಕೆಂದು ರೈತರು ಶಾಸಕ ಟಿ. ರಘುಮೂರ್ತಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

2025-26ನೇ ಸಾಲಿನಲ್ಲಿ ಖಾಸಗಿ ಬೆಳೆ ವಿಮೆ ಕಂಪನಿಯಿಂದ ತಾಲ್ಲೂಕಿನ ಸುಮಾರು 36,766 ರೈತರು ಒಟ್ಟು 1,14,900 ಎಕರೆ ಪ್ರದೇಶಕ್ಕೆ ಬೆಳೆ ವಿಮೆ ಮಾಡಿಸಿದ್ದರೂ, ಕಂಪನಿಯ ನಿರ್ಲಕ್ಷ್ಯದಿಂದ ಪರಿಹಾರ ಹಣ ಬಿಡುಗಡೆಯಾಗಿಲ್ಲ ಎಂದು ರೈತರು ದೂರಿದ್ದಾರೆ. ಈ ಕುರಿತು ಕೃಷಿ ಆಯುಕ್ತರಿಗೆ ಶಿಫಾರಸು ಮಾಡಿ ತಕ್ಷಣ ಪರಿಹಾರ ನೀಡಿಸಬೇಕೆಂದು ತಾಲ್ಲೂಕು ಕಸಬಾ ಹೋಬಳಿ ಶೇಂಗಾ ಮತ್ತು ತೊಗರಿ ಬೆಳೆಗಾರರ ಸಂಘ ಮನವಿ ಸಲ್ಲಿಸಿದೆ.

 

ಸಂಘದ ಅಧ್ಯಕ್ಷರು ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ.ಸಿ.ಶಿವಲಿಂಗಪ್ಪ ಮಾತನಾಡಿ, ಕಳೆದ ವರ್ಷವೂ ಖಾಸಗಿ ಬೆಳೆ ವಿಮಾ ಕಂಪನಿಯ ನಿರ್ಲಕ್ಷ್ಯದಿಂದ ತಾಲ್ಲೂಕಿನ ಸಾವಿರಾರು ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರು ಎಂದು ಹೇಳಿದರು. ನಿರಂತರ ಹೋರಾಟ ಹಾಗೂ ಶಾಸಕ ಟಿ. ರಘುಮೂರ್ತಿಯವರ ಪರಿಶ್ರಮದಿಂದ ಆಗ ಸುಮಾರು 3,580 ರೈತರಿಗೆ ₹3.52 ಕೋಟಿ ಪರಿಹಾರ ದೊರೆತಿತ್ತು ಎಂದು ಅವರು ನೆನಪಿಸಿದರು.

 

ಪ್ರಸ್ತುತ ಲಕ್ಷಾಂತರ ಶೇಂಗಾ ಬೆಳೆಗಾರರು ವಿಮೆ ಮಾಡಿಸಿಕೊಂಡಿದ್ದರೂ ಪರಿಹಾರ ಹಣ ನೀಡುವಲ್ಲಿ ಖಾಸಗಿ ಕಂಪನಿಗಳು ನಿರ್ಲಕ್ಷ್ಯ ತಾಳಿರುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ರೈತರು ಒತ್ತಾಯಿಸಿದ್ದಾರೆ.

 

 

ಮನವಿ ಸ್ವೀಕರಿಸಿದ ಶಾಸಕ ಟಿ. ರಘುಮೂರ್ತಿ, ಕೃಷಿ ಇಲಾಖೆ ಆಯುಕ್ತರಿಗೆ ಪತ್ರ ಬರೆದು ತಾಲ್ಲೂಕಿನ ಶೇಂಗಾ ಬೆಳೆಗಾರರ ವಿಮೆ ಪಾವತಿಯಲ್ಲಿ ನಿರ್ಲಕ್ಷ್ಯ ವಹಿಸಿದ ಖಾಸಗಿ ಬೆಳೆ ವಿಮಾ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ, ತಕ್ಷಣ ಪರಿಹಾರ ಹಣ ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.

 

ಪ್ರಗತಿಪರ ರೈತ ಡಾ.ಆರ್.ಎ.ದಯಾನಂದಮೂರ್ತಿ, ಎಲ್‌ಐಸಿ ತಿಪ್ಪೇಸ್ವಾಮಿ, ವೀರಣ್ಣ, ಸಿದ್ದೇಶ್ವರರೆಡ್ಡಿ, ಜಿ. ಎಸ್. ನಾಗರಾಜು, ಶರಣಪ್ಪ, ಭರತೇಶ್ ರೆಡ್ಡಿ, ತಮ್ಮೇಗೌಡ, ಪ್ರಕಾಶ್, ಜಿ. ಎಂ. ಶಶಿಧರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

chalakere ಚಳ್ಳಕೆರೆ ಚಿತ್ರದುರ್ಗ ಬೆಳೆ ರೈತ ವಿಮೆ
Follow on Facebook Follow on Instagram
Share. Facebook Twitter WhatsApp Telegram
Previous Articleಕಡತಗಳ ವಿಲೇವಾರಿಗೆ ಡೆಡ್ ಲೈನ್ ಫಿಕ್ಸ್ ; ಕರ್ತವ್ಯ ಲೋಪ ಎಸಗಿದರೆ ಶಿಸ್ತು ಕ್ರಮ
Next Article ನಿತ್ಯ ಭವಿಷ್ಯ – 09/04/2026 (ಗುರುವಾರ)
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ನಿತ್ಯ ಭವಿಷ್ಯ – 10/04/2026 (ಶುಕ್ರವಾರ)

April 9, 2026

ಸಿಬ್ಬಂದಿಗೆ ಬಿಸಿಲ ಶಿಕ್ಷೆ ಪ್ರಕರಣ;  ಕಂಟ್ರೋಲ್ ರೂಂಗೆ ಪಿಎಸ್ಐ ನೇತ್ರಾವತಿ 

April 9, 2026

ಅಧ್ಯಾತ್ಮ ರಶ್ಮಿ – 2   ಶ್ವೇತವಸ್ತ್ರದ ಸಂತ ಬೆಳಗೆರೆಯ  ಕೃಷ್ಣಶಾಸ್ತ್ರಿಗಳು

April 9, 2026
Add A Comment
Leave A Reply Cancel Reply

Advertisement
Latest Posts

ನಿತ್ಯ ಭವಿಷ್ಯ – 10/04/2026 (ಶುಕ್ರವಾರ)

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು

ದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ; ಶೇ. 86 ವಿದ್ಯಾರ್ಥಿಗಳು ಪಾಸ್ 

ಆಭರಣ ಪ್ರಿಯರಿಗೆ ಸಿಹಿಸುದ್ದಿ!! ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ 

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.