ನವದೆಹಲಿ: ಭಾರತ ಮತ್ತು ಜಪಾನ್ ನಡುವಿನ ಪಾಲುದಾರಿಕೆಯು ಎರಡು ದೇಶಗಳಿಗೆ ಮಾತ್ರವಲ್ಲ, ಜಾಗತಿಕ ಶಾಂತಿ ಮತ್ತು ಸುರಕ್ಷತೆಗೂ ಸಹ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ಟೋಕಿಯೊದಲ್ಲಿ ಜಪಾನ್ ಪ್ರಧಾನಿ ಶಿಗೇರು ಇಶಿಬಾ ಅವರೊಂದಿಗೆ ಜಂಟಿಯಾಗಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ಮೋದಿ (PM Modi) ಈ ಹೇಳಿಕೆ ನೀಡಿದ್ದಾರೆ. ಉತ್ತಮ ಜಗತ್ತನ್ನು ರೂಪಿಸುವಲ್ಲಿ ಭಾರತ ಮತ್ತು ಜಪಾನ್ ನೈಸರ್ಗಿಕ ಪಾಲುದಾರರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು (ಶುಕ್ರವಾರ) ಭಾರತ-ಜಪಾನ್ ಜಂಟಿ ಆರ್ಥಿಕ ವೇದಿಕೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಎರಡು ರಾಷ್ಟ್ರಗಳ ನಡುವಿನ ಆಳವಾದ ಕಾರ್ಯತಂತ್ರ ಮತ್ತು ಆರ್ಥಿಕ ಪಾಲುದಾರಿಕೆಯನ್ನು ಒತ್ತಿ ಹೇಳಿದ್ದಾರೆ. ಟೋಕಿಯೊದಲ್ಲಿ ಮಾತನಾಡಿದ ಪಿಎಂ ಮೋದಿ, ಭಾರತದ ತ್ವರಿತ ಬೆಳವಣಿಗೆ, ಜಪಾನಿನ ಹೂಡಿಕೆಗಳ ಹೆಚ್ಚುತ್ತಿರುವ ಪಾತ್ರ ಮತ್ತು ಜಾಗತಿಕ ಆರ್ಥಿಕ ಶಕ್ತಿ ಕೇಂದ್ರವಾಗಿ ಭಾರತದ ಭರವಸೆಯ ಭವಿಷ್ಯವನ್ನು ಎತ್ತಿ ತೋರಿಸಿದ್ದಾರೆ.
ಪ್ರಧಾನಿ ಮೋದಿ ಜಪಾನ್ ಅನ್ನು ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಪ್ರಮುಖ ಪಾಲುದಾರ ಎಂದು ಶ್ಲಾಘಿಸಿದ್ದಾರೆ. “ಮೆಟ್ರೋ ರೈಲಿನಿಂದ ಉತ್ಪಾದನೆಯವರೆಗೆ, ಸೆಮಿಕಂಡಕ್ಟರ್ಗಳಿಂದ ಸ್ಟಾರ್ಟ್ಅಪ್ಗಳವರೆಗೆ ಜಪಾನ್ ಯಾವಾಗಲೂ ಪ್ರಮುಖ ಪಾಲುದಾರನಾಗಿದೆ” ಎಂದು ಅವರು ಹೇಳಿದ್ದಾರೆ.ಪ್ರಧಾನಿಯವರ ಎರಡು ದಿನಗಳ ಜಪಾನ್ ಭೇಟಿಯು 15ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸುವಿಕೆ ಮತ್ತು ಜಪಾನಿನ ಪ್ರಧಾನಿ ಶಿಗೇರು ಇಶಿಬಾ ಅವರೊಂದಿಗೆ ಉನ್ನತ ಮಟ್ಟದ ಚರ್ಚೆಗಳನ್ನು ಒಳಗೊಂಡಿದೆ. ಜಪಾನ್ ಭಾರತದಲ್ಲಿ ತನ್ನ ಹೂಡಿಕೆ ಗುರಿಗಳನ್ನು ದ್ವಿಗುಣಗೊಳಿಸುವುದಾಗಿ ಘೋಷಿಸುವ ಮತ್ತು ವ್ಯಾಪಾರ, ರಕ್ಷಣೆ, ವಿಜ್ಞಾನ, ತಂತ್ರಜ್ಞಾನದಲ್ಲಿ ಸಹಕಾರವನ್ನು ಹೆಚ್ಚಿಸಲು ಹೊಸ ಒಪ್ಪಂದಗಳನ್ನು ಅನಾವರಣಗೊಳಿಸುವ ನಿರೀಕ್ಷೆಯಿದೆ.ಜಪಾನ್ ಪ್ರವಾಸದ ನಂತರ ಪ್ರಧಾನಿ ಮೋದಿ ಟಿಯಾಂಜಿನ್ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಗಾಗಿ ಚೀನಾಕ್ಕೆ ತೆರಳಲಿದ್ದಾರೆ. ತಮ್ಮ ಚೀನಾದ ಭೇಟಿಯ ಸಮಯದಲ್ಲಿ ಮೋದಿ ಎರಡು ನಿರ್ಣಾಯಕ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಅದರಲ್ಲಿ ಒಂದು ಕ್ಸಿ ಅವರೊಂದಿಗೆ ಮತ್ತು ಇನ್ನೊಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ. ಟ್ರಂಪ್ ಆಡಳಿತವು ಭಾರತ ರಷ್ಯಾದ ಕಚ್ಚಾ ತೈಲ ಖರೀದಿಸಿದ್ದಕ್ಕಾಗಿ ಭಾರತೀಯ ಸರಕುಗಳ ಮೇಲೆ ಶೇ. 50ರಷ್ಟು ಸುಂಕವನ್ನು ವಿಧಿಸಿದ ನಂತರ ಅಮೆರಿಕದೊಂದಿಗೆ ಸಂಬಂಧಗಳು ಹದಗೆಟ್ಟ ಹಿನ್ನೆಲೆಯಲ್ಲಿ ಎರಡೂ ದೇಶಗಳು ಭಾರತವನ್ನು ಬೆಂಬಲಿಸಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







