ದೇವನಹಳ್ಳಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದ ಹೊರಾಟಗಾರರ ಮೇಲೆ ನಡೆÀದ ಪೋಲಿಸ್ ದೌರ್ಜನ್ಖಡಿಸಿ
ಚಿತ್ರದುರ್ಗ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಸಂಯುಕ್ತ ಹೋರಾಟ ಸಮಿತಿವತಿಯಿಂದ ರೈತರು ಪ್ರತಿಭಟನೆ ನಡೆಸಿದ್ದಾರೆ.
ದೇವನಹಳ್ಳಿಯಲ್ಲಿ ಅತ್ಯಂತ ಶಾಂತಿಯುತವಾಗಿ ನಡೆದಿದ್ದ ರೈತರ ಪ್ರತಿಭಟನೆಯನ್ನ ಪೊಲಿಸ್ ಬಲ ಬಳಸಿ ಹೋರಾಟವನ್ನು
ಹತ್ತಿಕ್ಕುವ ಪ್ರಯತ್ನವನ್ನ ಕಾಂಗ್ರೆಸ್ ಸರ್ಕಾರ ನಡೆಸಿದೆ ವಯಸ್ಸಾದ ಮಹಿಳೆರನ್ನು ಬಿಡದೆ ಎಲ್ಲಾ ಹೋರಾಟಗಾರರನ್ನು ಸಿಕ್ಕಾಪಟ್ಟಿ
ಎಳೆದಾಡಿ ಪೋಲಿಸ್ ವಶಕ್ಕೆ ಪಡೆದಿದ್ದಾರೆ ಅಭಿವೃದ್ಧಿ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂದೆಕೊರರಿಗೆ ಲಾಭ ಮಾಡಿಕೊಡಲು
ಅಸಂಖ್ಯಾತ ರೈತ ಸಮುದಾಯವನ್ನು ಬೀದಿಪಾಲು ಮಾಡಲು ಹೊರಟಿದೆ ಎಂದು ಆಗ್ರಹಿಸಿದರು.
ದೇವನಹಳ್ಳಿ ಚನ್ನರಾಯಪಟ್ಟಣ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು, ಬಂಧಿತ ರೈತರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು,
ಹೊರಾಟಗಾರರೊಂದಿಗೆ ಹೀನಾಯವಾಗಿ ವರ್ತಿಸಿದ ಪೋಲಿಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾಧ ಧನಂಜಯ, ಮಲ್ಲಿಕಾರ್ಜನ್, ಬಸ್ತಿಹಳ್ಳಿ ಸುರೇಶ್‍ಬಾಬು, ನಾಗರಾಜ್ ಷಫಿವುಲ್ಲಾ,
ಪುರುಷೋತ್ತಮ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಸಿದ್ದಪ್ಪ, ಯಾದವರೆಡ್ಡಿ, ಹೊರಕೇರಪ್ಪ ಜಿ.ಕೆ.ನಾಗರಾಜ್ ಸೇರಿದಂತೆ ಇತರರು
ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



