ಚಿತ್ರದುರ್ಗ: ಬಲವಂತವಾಗಿ ರೈತರ ಭೂಮಿಯನ್ನು ಸ್ವಾಧಿನಪಡಿಸಿಕೊಳ್ಳುವ ರಾಜ್ಯ ಸರ್ಕಾರದ ದೌರ್ಜನ್ಯ ವಿರೋಧಿಸಿ
ದೇವನಹಳ್ಳಿಯಲ್ಲಿ ಕಳೆದ 25ರಂದು ಹೋರಾಟ ನಡೆಸಿದ ರೈತರ ಬಂಧನ ಖಂಡಿಸಿ ಕಮ್ಯುನಿಸ್ಟ್
ಪಕ್ಷದ ಕಾರ್ಯಕರ್ತರು ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಬಂಧನಕ್ಕೊಳಗಾದ ರೈತರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.
ಇದೆ ವೇಳೆ ಪ್ರತಿಭಟನೆಯನ್ನುದ್ದೇಶಿಸಿ ಜಿಲ್ಲಾ ಸದಸ್ಯ ಡಿ.ಎಂ.ಮಲಿಯಪ್ಪ ಮಾತನಾಡಿ ಕಾರ್ಪೊರೇಟ್ ಕಂಪನಿ, ಭೂ ಮಾಲೀಕರ ಪರವಾಗಿರುವ ಸಿಎಂ ಸಿದ್ದರಾಮಯ್ಯ ದೇವನಹಳ್ಳಿ ಸಮೀಪವಿರುವ ಚನ್ನರಾಯಪಟ್ಟಣದ ಸುತ್ತಮುತ್ತ ಹದಿಮೂರುಹಳ್ಳಿಗಳಲ್ಲಿ ರೈತರ ಜಮೀನ ವಶಪಡಿಸಿಕೊಳ್ಳುವುದಕ್ಕೆ ಅಂಕಿತ ಹಾಕಲು ಮುಂದಾಗಿರುವುದನ್ನು ನೋಡಿದರೆ 50 ವರ್ಷಗಳಹಿಂದೆ ಪ್ರಧಾನಿ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದು ನೆನಪಾಗುತ್ತದೆ. ರೈತರು, ಕಾರ್ಮಿಕರು, ಮಹಿಳೆಯರು,ವಿದ್ಯಾರ್ಥಿಗಳಪರವಾಗಿರಬೇಕಾಗಿದ್ದ ರಾಜ್ಯ ಸರ್ಕಾರ ಉದ್ಯಮಿಗಳ ಪರವಾಗಿದೆ. ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು 1180 ದಿನಗಳಿಂದಮುಷ್ಕರ ನಡೆಸುತ್ತಿರುವ ರೈತರು, ಮಹಿಳೆಯರನ್ನು ಕಡೆಗಣಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾದಿತೆಂದುಖಡಕ್ ಎಚ್ಚರಿಕೆ ನೀಡಿದರು.
ಜೊತೆಗೆಪೊಲೀಸರ ಮೂಲಕ ರೈತರು, ಮಹಿಳೆಯರ ಮೇಲೆ ದೌರ್ಜನ್ಯವೆಸಗಿದರೆ ನಾವುಗಳು ಸಹಿಸುವುದಿಲ್ಲ. ಬಂಧಿತರೈತರನ್ನುಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದರು. ಇನ್ನುಜಿಲ್ಲಾ ಸದಸ್ಯ ಟಿ.ತಿಪ್ಪೇಸ್ವಾಮಿ ಮಾತನಾಡಿ ಅಹಿಂದ ನಾಯಕ ಎಂದು ಹೇಳಿಕೊಳ್ಳುತ್ತಿರುವ ರಾಜ್ಯದ ಮುಖ್ಯಮಂತ್ರಿಸಿದ್ದರಾಮಯ್ಯ ಅವರ ಮುಖವಾಡ ಕಳಚಿದೆ. ರೈತರು ಕಾರ್ಮಿಕರು, ಮಹಿಳೆಯರ ವಿರೋಧಿಯಾಗಿದ್ದಾರೆ. ಕೇಂದ್ರ ಸರ್ಕಾರ ಧರ್ಮದಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ. ರಾಜ್ಯ ಸರ್ಕಾರ ಉಚಿತ ಗ್ಯಾರೆಂಟಿಗಳ ಮೇಲೆ ರಾಜಕೀಯ ಬೇಳೆಕಾಳು ಬೇಯಿಸಿಕೊಳ್ಳುತ್ತಿದೆ ಬಂಧಿಸಿರುವ ರೈತರು, ಸಿ.ಐ.ಟಿ.ಯು. ಮುಖಂಡರುಗಳನ್ನು ಬಿಡುಗಡೆಗೊಳಿಸದಿದ್ದರೆ ಮುಂದೆ ದೊಡ್ಡ ಹೋರಾಟಮಾಡಬೇಕಾಗುತ್ತದೆಂದರು. ಇದೆ ಸಂದರ್ಭದಲ್ಲಿಟಿ.ನಿಂಗಣ್ಣ, ಹೆಚ್.ಓ.ನಾಗರಾಜ್, ನಿರ್ಮಲ, ಮಂಜಮ್ಮ, ಕಲ್ಯಾಣಮ್ಮ, ಸೀಬಾ, ಆಶಾ, ರೇಣುಕ ಇನ್ನು ಅನೇಕರುಪ್ರತಿಭಟನೆಯಲ್ಲಿಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



