ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೇ ಚಿತ್ರದುರ್ಗ ಆಸ್ಪತ್ರೆಯಲ್ಲಿ ಅಜ್ಜಯ್ಯ (45) ಎಂಬವರು ಇದೀಗ ಸಾವನ್ನಪ್ಪಿದ್ದಾರೆ. ಮಗಳ ಕುರಿತು ತನ್ನ ದೂರಿಗೆ ಸ್ಪಂದಿಸದ ಹೊಳಲ್ಕೆರೆ ಪೊಲೀಸರ ನಿರ್ಲಕ್ಷ್ಯಕ್ಕೆ ಬೇಸತ್ತು ಅಜ್ಜಯ್ಯ ಆತ್ಮಹತ್ಯೆಗೆ ಯತ್ನಿಸಿದ್ದರು.
ಪುತ್ರಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ಅಜ್ಜಯ್ಯ ಠಾಣೆಗೆ ದೂರು ನೀಡಲು ತೆರಳಿದ್ದಾರೆ. ಒಂದು ಬಾರಿ ಪುತ್ರಿಯನ್ನು ಭೇಟಿ ಮಾಡಲು ಅವಕಾಶ ಕೊಡಿ ಎಂದು ಕೇಳಿದ್ದರು. ಆದರೆ ಪೊಲೀಸರು ದೂರು ತೆಗೆದುಕೊಳ್ಳದೆ ಅವರನ್ನು ಅಲೆದಾಡಿಸಿದ್ದಾರೆ. ಮನನೊಂದು ಅಜ್ಜಯ್ಯ ಪೊಲೀಸ್ ಠಾಣೆಯ ಬಳಿಯೇ ವಿಷ ಸೇವಿಸಿದ್ದರು. ಅವರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಜಿಲ್ಲಾ ಆಸ್ಪತ್ರೆಯಲ್ಲಿ ಅಜ್ಜಯ್ಯ ಸಾವನ್ನಪ್ಪಿದ್ದಾರೆ. ಹೊಳಲ್ಕೆರೆ ಪೊಲೀಸರ ವಿರುದ್ಧ ಅಜ್ಜಯ್ಯ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



