Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜಕೀಯ»ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 
ರಾಜಕೀಯ

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿFebruary 5, 2026No Comments4 Mins Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}
Share
WhatsApp Twitter Facebook Telegram

*ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌*

*ಶೂನ್ಯ ಸಾಧನೆಯ ಸರ್ಕಾರಕ್ಕೆ ದಿಕು ತಪ್ಪಿಸುವುದೇ ಕಾಯಕ; ಅದಕ್ಕಾಗಿ ಕೇಂದ್ರದ ವಿರುದ್ಧ ಗೂಬೆ ಕೂರಿಸಲಾಗುತ್ತಿದೆ ಎಂದು ಆಕ್ರೋಶ* 

 *ತಿಮ್ಮಾಪುರ ರಾಜೀನಾಮೆ ತನಕ ಹೋರಾಟ; ಜನತಾ ನ್ಯಾಯಾಲಯಕ್ಕೆ ಅಬಕಾರಿ ಹಗರಣ* 

 *ಅಧಿವೇಶನದಲ್ಲಿ ಸ್ಪೀಕರ್‌ ಸರ್ಕಾರದ ಕೈಗೊಂಬೆಯಾಗಿ ವರ್ತಿಸಿದ್ದಾರೆ, ಅಸಂಸದೀಯ ನಡುವಳಿಕೆ ವೇಳೆ ನಗುತ್ತಾ ಕುಳಿತ್ತಿದ್ದರು ಎಂದು ಆಕ್ಷೇಪ* 

 *ಬೆಂಗಳೂರು:* ಸಿದ್ದರಾಮಯ್ಯ ನೇತೇತ್ವದ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ಮುಖವಾಡವನ್ನು ಅಧಿವೇಶನದಲ್ಲಿ ಕಳಚಿ ಹಾಕುವಲ್ಲಿ ಯಶಸ್ವಿಯಾಗಿರುವುದಾಗಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ.

ಅಧಿಕಾರಕ್ಕೆ ಬಂದ ದಿನದಿಂದ ಹಗರಣಗಳ ಸುಳಿಯಲ್ಲೇ ಸರ್ಕಾರ ಸಿಕ್ಕಿಕೊಂಡಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿರುವ ಆರು ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ಲೂಟಿ ಹಗರಣಗಳ ಪಟ್ಟಿಗೆ ಹೊಸ ಸೇರ್ಪಡೆ ಎಂದು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಗುರುವಾರ ಆರೋಪಿಸಿದ್ದಾರೆ.

ಹೇಳಿಕೊಳ್ಳಲು ಯಾವುದೇ ಅಭಿವೃದ್ಧಿ ಕಾರ್ಯಕ್ರಮ ಮಾಡಿಲ್ಲ. ಜತೆಗೆ ಖಜಾನೆ ಖಾಲಿಯಾಗಿದೆ. ತಮ್ಮ ಪಾಲಿನ ಶೇಕಡಾ 40 ಹಣ ಭರಿಸುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ “ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು” ಎಂಬಂತೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ “ವಿಬಿ ಜಿ – ರಾಮ್‌ ಜಿ” ಕಾಯ್ದೆ ವಿರುದ್ಧ ತಕರಾರು ತೆಗೆದಿದ್ದಾರೆ ಎಂದು ಟೀಕಿಸಿದರು.

ಈ ವಾಸ್ತವ ಸಂಗತಿ ಮರೆ ಮಾಚಿ, ಇಲ್ಲಸಲ್ಲದ ಆರೋಪ ಮಾಡಿ ಕೇಂದ್ರದ ವಿರುದ್ಧ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕಾಗಿ ಪಂಚಾಯಿತಿ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಕೋಟ್ಯಂತರ ರೂ. ವೆಚ್ಚ ಮಾಡಿ ಮಾಧ್ಯಮಗಳಿಗೆ ಜಾಹಿರಾತು ಬಿಡುಗಡೆ ಮಾಡಲಾಗಿದೆ. ಹಣದ ಕೊರತೆ ಎದುರಿಸುತ್ತಿದ್ದರೂ ಜನರ ತೆರಿಗೆ ಹಣವನ್ನು ಈ ರೀತಿ ರಾಜಕೀಯ ತೆವಲುಗಳಿಗೆ ಪೋಲು ಮಾಡಲಾಗುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಲೂಟಿ ಅಂಗಡಿ ಬಂದ್‌ ನರೇಗಾ ಯೋಜನೆಯನ್ನು ತೋಚಿದಂತೆ ಬಳಕೆ ಮಾಡಿ ಕೋಟಿಗಟ್ಟಲೇ ಹಣ ಲೂಟಿ ಮಾಡುತ್ತಿದ್ದರು. ಹೊಸ ಕಾಯ್ದೆ ಅದಕ್ಕೆಲ್ಲಾ ತೆರೆ ಎಳೆದಿದೆ. ಈಗ ಆಧುನಿಕತೆ ಸ್ಪರ್ಶದ ಜತೆ ಕಟ್ಟುನಿಟ್ಟಿನ ಹೊಸ ಕಾನೂನು ರೂಪಿಸಿದೆ. ಮಹತ್ಮಾ ಗಾಂಧಿ ಅವರ ಆಶಯದಂತೆ ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳೊಂದಿಗೆ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ. ಆದರೆ ತಮ್ಮ ಲೂಟಿಗೆ ಅವಕಾಶ ತಪ್ಪಿ ಹೋಯಿತು ಮತ್ತು ಶೇಕಡಾ 40 ರಷ್ಟು ಹಣ ಭರಿಸಬೇಕು ಎಂಬ ಸಂಕಟದಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ಕಳೆದ ಎರಡೂವರೆ ವರ್ಷಗಳಲ್ಲಿ ಹಗರಣಗಳೇ ಈ ಸರ್ಕಾರದ ಸಾಧನೆ. ಹೀಗಾಗಿ ರಾಜ್ಯಪಾಲರ ಜತೆ ಕಾಲು ಕೆರೆದು ಜಗಳ ಮಾಡುವುದು, ಕೇಂದ್ರದ ವಿರುದ್ಧ ನಿರ್ಣಯ ಮಂಡಿಸುವ ನೆಪದಲ್ಲಿ ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಷಡ್ಯಂತ್ರ ರೂಪಿಸಲಾಗಿತ್ತು. ಆದರೆ ಆ ಹುನ್ನಾರಗಳಿಗೆ ಅವಕಾಶ ನೀಡದೆ ಜನತೆಗೆ ವಾಸ್ತವ ಸಂಗತಿಗಳನ್ನು ಮನವರಿಕೆ ಮಾಡಿಕೊಡುವಲ್ಲಿ ಸದನದೊಳಗೆ ಬಿಜೆಪಿ ಹೋರಾಟ ಯಶಸ್ವಿಯಾಗಿದೆ ಎಂದರು.

*ಜನತಾ ನ್ಯಾಯಾಲಯಕ್ಕೆ ಅಬಕಾರಿ ಹಗರಣ*

ಅಬಕಾರಿ ಇಲಾಖೆಯಲ್ಲಿ ನಡೆದಿರುವ ಆರು ಸಾವಿರ ಕೋಟಿಗೂ ಅಧಿಕ ಮೊತ್ತದ ಹಗರಣವನ್ನು ಅಧಿವೇಶನದಲ್ಲಿ ಎಳೆ ಎಳೆಯಾಗಿ ಬಿಡಿಸಿಡಲಾಗಿದೆ. ಸಚಿವ ತಿಮ್ಮಾಪುರ ರಾಜೀನಾಮೆ ಮತ್ತು ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಆಗ್ರಹಿಸಿದ್ದೆವು. ಆದರೆ ಹೈಕಮಾಂಡ್‌ ಹಾಗೂ ಸಿಎಂ ಆದಿಯಾಗಿ ಎಲ್ಲರೂ ಸೇರಿಕೊಂಡು ಲೂಟಿ ಮಾಡಿರುವುದರಿಂದ ಕಳಂಕಿತ ಸಚಿವರ ಬೆಂಬಲಕ್ಕೆ ಇಡೀ ಸಚಿವ ಸಂಪುಟವೇ ನಿಂತುಕೊಂಡಿತ್ತು. ಇದು ರಾಜ್ಯದ ಇತಿಹಾಸದಲ್ಲಿ ಹಿಂದೆ ಎಂದೆಂದೂ ನಡೆದಿರಲಿಲ್ಲ. ಇಲ್ಲಿ ಲೂಟಿ ಮಾಡಿದ ಹಣವನ್ನು ನೆರೆ ರಾಜ್ಯಗಳ ಚುನಾವಣೆಗಳಿಗೆ ಬಳಕೆ ಮಾಡುತ್ತಿರುವುದು ಸ್ಪಷ್ಟ ಎಂದರು.

ಆರೋಪಕ್ಕೆ ಒಂದು ಆಧಾರ ನೀಡಿದರೂ ರಾಜೀನಾಮೆ ನೀಡುವುದಾಗಿ ಸಚಿವ ತಿಮ್ಮಾಪುರ ಹೇಳಿದ್ದರು. ಒಂದಲ್ಲಾ, ಎರಡಲ್ಲಾ ಐದಕ್ಕೂ ಹೆಚ್ಚು ಸಾಕ್ಷ್ಯ ನೀಡಲಾಯಿತು. ಲಂಚ ಸ್ವೀಕಾರಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿರುವ ಮೂರು ಆಡಿಯೋ ಸಂಭಾಷಣೆ, ಎರಡು ಲೋಕಾಯುಕ್ತ ದೂರು, ರಾಜ್ಯಪಾಲರಿಗೆ ನೀಡಿದ್ದ ಒಂದು ದೂರು, ಲೋಕಾಯುಕ್ತರಿಗೆ ಸಿಕ್ಕಿಬಿದ್ದಿರುವ ನಿಂಗಪ್ಪ ಎಂಬಾತ ನೀಡಿದ್ದ ಸ್ವ ಇಚ್ಚಾ ಹೇಳಿಕೆಯಂತಹ ಗಂಭೀರ ಸಾಕ್ಷ್ಯ ನೀಡಿ ಮನವರಿಕೆ ಮಾಡಿಕೊಡಲಾಯಿತು. ಸಂವೇದನೆ ಇಲ್ಲದ ಈ ಸರ್ಕಾರ ಯಾವುದಕ್ಕೂ ಮಣಿಯಲಿಲ್ಲ ಎಂದು ಲೇವಡಿ ಮಾಡಿದರು.

ಅಧಿವೇಶನದಲ್ಲಿ ಆರಂಭಿಸಿರುವ ಈ ಹೋರಾಟ ನಿಲ್ಲುವುದಿಲ್ಲ. ಪಕ್ಷದ ವತಿಯಿಂದ ರಾಜ್ಯವ್ಯಾಪಿ ಹೋರಾಟಕ್ಕೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಅಂತಿಮವಾಗಿ

“ಜನತಾ ನ್ಯಾಯಾಲಯ”ದ ಮುಂದೆ ಹಗರಣವನ್ನು ಕೊಂಡೊಯ್ಯಲಾಗುವುದು. ಕಾನೂನು ಹೋರಾಟ ನಡೆಸುವ ಬಗ್ಗೆಯೂ ಆಲೋಚನೆ ನಡೆಸಲಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲ ಪ್ರಮುಖ ಸಾಕ್ಷ್ಯಗಳು ಸಿಗುವ ಸೂಚನೆಗಳಿವೆ. ಅವುಗಳ ಸಮೇತ ಸಾರ್ವಜನಿಕರ ಮುಂದೆ ಈ ಸರ್ಕಾರದ ಬಣ್ಣ ಬಯಲು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

*ಅಸಂಸದೀಯ ನಡುವಳಿಕೆ*

ನಮ್ಮ ಪಕ್ಷದ ಶಾಸಕರು ಪ್ರತಿಭಟನೆ ನಡೆಸುತ್ತಿದ್ದಾಗ ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ಅವರು, ಅಸಂಸದೀಯ ರೀತಿ ವರ್ತಿಸಿದ್ದಾರೆ. ಸದನದಲ್ಲೇ ಅದನ್ನು ಖಂಡಿಸಿದ್ದೇವೆ. ಸರಿದಾರಿಯಲ್ಲಿ ಕಲಾಪ ನಡೆಸಬೇಕಿದ್ದ ಸ್ಪೀಕರ್‌ ಅವರು, ಕಾಂಗ್ರೆಸ್‌ ಪಕ್ಷದ ಪರ ಕರ್ತವ್ಯ ನಿರ್ವಹಿಸಿದ್ದಾರೆ. ಶಿವಲಿಂಗೇಗೌಡ ಅವರು ವೈಯಕ್ತಿಕ ಆರೋಪ ಮಾಡುವಾಗ ನಗುತ್ತಾ ಕುಳಿತ್ತಿದ್ದರು. ಇದು ಅತೀವ ಬೇಸರದ ವಿಷಯ ಮಾತ್ರವಲ್ಲ, ಆ ಪೀಠದ ಘನತೆಗೆ ಕುಂದು ಮಾಡಿದ ಬಗ್ಗೆ ಅಸಮಾಧಾನವಿದೆ. ಆ ಕುರಿತು ಸದನದೊಳಗೆ ಪ್ರತಿರೋಧ ವ್ಯಕ್ತಪಡಿಸಲಾಯಿತು ಎಂದರು.

ಒಟ್ಟಾರೆ ಈ ಅಧಿವೇಶನದಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗಿದೆ. ಹಾಗೆಯೇ ಸರ್ಕಾರದ ಹಗರಣಗಳನ್ನು ಭ್ರಷ್ಟಾಚಾರ, ಅಕ್ರಮದ ಬಗ್ಗೆ ನಾಡಿನ ಜನತೆಯ ಗಮನ ಸೆಳೆದು ಅಧಿವೇಶನವನ್ನು ಯಶಸ್ವಿ ಮಾಡಿರುವ ತೃಪ್ತಿ ಇದೆ. ಮುಂದಿನ ಬಜೆಟ್‌ ಅಧಿವೇಶನದಲ್ಲೂ ಈ ಸರ್ಕಾರದ ಬಣ್ಣ ಬಯಲು ಮಾಡದೇ ಬಿಡುವುದಿಲ್ಲ ಎಂದೂ ಅಶೋಕ್‌ ಎಚ್ಚರಿಕೆ ನೀಡಿದರು.

*ಇದಕ್ಕಿಂತ ಇನ್ನೊಂದು ನಿದರ್ಶನ ಬೇಕೆ?*

ಕಾಂಗ್ರೆಸ್‌ ಸರ್ಕಾರದ ಕಮಿಷನ್‌ ಹಾವಳಿ ಅಡಿಯಿಂದ ಮುಡಿವರೆಗೆ ಹರಡಿಕೊಂಡಿದೆ ಎಂದು ಸದನದ ಲ್ಲಿ ತಾವು ಮಾಡಿರುವ ಆರೋಪಕ್ಕೆ ಪುಷ್ಟಿ ನೀಡುವಂತೆ ತುಮಕೂರಿನ ಮಧುಗಿರಿಯಲ್ಲಿ ರೈತನೊಬ್ಬ ತಾನು ಬೆಳೆದ ಮೂಲಂಗಿಯನ್ನೇ ಮಧುಗಿರಿ ತಾಲ್ಲೂಕು ಕಚೇರಿ ಬಳಿ ತಂದು “ಬನ್ನಿ ಬನ್ನಿ ಲಂಚವಾಗಿ ನಾನು ಬೆಳೆದ ಮೂಲಂಗಿ ಕೊಡುತ್ತೇನೆ, ನನ್ನ ಕೆಲಸ ಮಾಡಿಕೊಡಿ. ನನ್ನ ಬಳಿ ನಿಮಗೆ ಕೊಡಲು ಹಣ ಇಲ್ಲ. ಬೆಳೆದ ಮೂಲಂಗಿಯನ್ನೇ ಕೊಡುತ್ತೇನೆ” ಎಂದು ಘೋಷಣೆ ಕೂಗಿರುವ ಪ್ರಕರಣ ನಿದರ್ಶನವಾಗಿದೆ.

ಪದ್ಮ ಪ್ರಶಸ್ತಿ ಪುರಸ್ಕೃತೆ ಗುಬ್ಬಿ ವೀರಣ್ಣ ಅವರ ಮೊಮ್ಮಗಳು ಜಯಶ್ರೀ ಅವರಿಗೆ ಸತಾಯಿಸಿ ಅಪಮಾನಿಸಿರುವ ಕಂದಾಯ ಇಲಾಖೆ ಅಧಿಕಾರಿಗಳು, ಇನ್ನೂ ಬಡವರನ್ನು ಬಿಡುತ್ತಾರೆಯೇ? ಎಂದು ಸಿಎಂ ಅವರಿಗೆ ಸದನದಲ್ಲೇ ಹೇಳಿದ್ದೆ. ಅದು ನಿಜ ಎಂಬಂತೆ ಈ ರೈತನ ಮನ ಕರಗುವ ಪ್ರಕರಣ ನಡೆದಿದೆ. ಇದು ಕರ್ನಾಟಕದ ದುರಂತ. ಹಿಂದೆ ಯಾವುದೇ ಸರ್ಕಾರದ ಅವಧಿಯಲ್ಲೂ ಇಷ್ಟು ನೀತನಕ್ಕೆ ಆಡಳಿತಶಾಹಿ ಇಳಿದಿರಲಿಲ್ಲ ಎಂದು ಅಶೋಕ್‌ ವಿಷಾದಿಸಿದರು.

————-

Bangalore goverment politics ಅಶೋಕ್ ಚುನಾವಣೆ ಪ್ರಿಪಾಕ್ಷ ನಾಯಕ ವಿಧಾನಸಭೆ ಸಿದ್ದರಾಮಯ್ಯ
Follow on Facebook Follow on Instagram
Share. Facebook Twitter WhatsApp Telegram
Previous Articleಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

February 4, 2026

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

February 3, 2026

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

February 3, 2026
Add A Comment
Leave A Reply Cancel Reply

Advertisement
Demo
Latest Posts

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.