ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಮತ್ತು 10 ಲಕ್ಷ ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿತ್ತು. ಈ ಪ್ರಕರಣದಲ್ಲಿ ವೇಗವಾಗಿ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿ ಪ್ರಕರಣದ ವಿಚಾರಣೆಗೆ ವೇಗ ತಂದುಕೊಟ್ಟ ಎಸ್ಐಟಿ ತಂಡವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅಭಿನಂದಿಸಿದ್ದಾರೆ. ಅಷ್ಟೇ ಅಲ್ಲದೆ ಆ ತಂಡಕ್ಕೆ ಸಿಎಂ ಪದಕ ನೀಡಲಾಗುತ್ತದೆ ಎಂದು ಘೋಷಿಸಿದರು. ಇನ್ನು ಜೈಲುಹಕ್ಕಿಯಾಗಿರುವ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಮವಸ್ತ್ರ, ಕೈದಿ ಸಂಖ್ಯೆ ನೀಡಲಾಗಿದೆ. ಆಜೀವ ಜೈಲು ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣ ನಿಯಮಗಳಂತೆ ಜೈಲಿನ ಒಳಗೆ 8 ಗಂಟೆ ಕೆಲಸ ಮಾಡಬೇಕು. ಅಪರಾಧಿ ಆಯ್ಕೆ ಮಾಡಿಕೊಂಡ ಕೆಲಸಕ್ಕೆ ತಕ್ಕಂತೆ ಸಂಬಳ ಕೂಡ ನೀಡಲಾಗುತ್ತದೆ. ಮತ್ತೊಂದೆಡೆ ಪ್ರಜ್ವಲ್ ರೇವಣ್ಣರ ಸೆಕ್ಸ್ ಪೆನ್ ಡ್ರೈವ್ ಹಂಚಿಕೆ ಕುರಿತಂತೆ ಪೊಲೀಸರು 100 ಕ್ಕೂ ಹೆಚ್ಚು ಲ್ಯಾಪ್‌ಟಾಪ್‌ಗಳು, ಮೊಬೈಲ್ ಫೋನ್‌ಗಳು ಮತ್ತು ಪೆನ್ ಡ್ರೈವ್‌ಗಳನ್ನು ವಶಪಡಿಸಿಕೊಂಡಿದ್ದು ಮುಂದಿನ ಎರಡು ವಾರದಲ್ಲಿ ಪೆನ್‌ಡ್ರೈವ್ ಹಂಚಿಕೆ ಮಾಡಿದ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



