ಬೆಂಗಳೂರು: ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಪ್ರಕರಣ ಸಂಬಂಧ ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಪ್ರಕಟಿಸಲಿದ್ದು, ಮಾಜಿ ಸಂಸದ ನಿಗೆ ಶಿಕ್ಷೆಯೋ ಅಥವಾ ಖುಲಾಸೆಯೋ ಎಂಬುದು ನಿರ್ಧಾರವಾಗಲಿದೆ.
ಗಜಾನನ ಭಟ್ ಅವರು, ಇಂದು ತೀರ್ಪು ಪ್ರಕಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ತೀರ್ಪು ಪ್ರಕಟ ವೇಳೆ ಆರೋಪಿ ಪ್ರಜ್ವಲ್ ರೇವಣ್ಣರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
4 ಕೇಸ್ ಪೈಕಿ ಒಂದು
ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾ ಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಡಿ ಒಟ್ಟು 4 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಸಿಐಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಸಿಐಡಿ ಎಸ್‌ಐಟಿ ಅಧಿ ಕಾರಿಗಳು ದೋಷಾರೋಪಪಟ್ಟಿ ಸಲ್ಲಿಸಿದ್ದರು.
ಪ್ರಕರಣ ಸಂಬಂಧ ಜು.18ರಂದು ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣ ಗೊಳಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ನೀಡುವ ಸಾಧ್ಯತೆ ಇದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



