ಚಿತ್ರದುರ್ಗ : 18ನೇ ವರ್ಷದ ಚಿತ್ರದುರ್ಗ ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಕ್ಷಣಗಣನೆ ಆರಂಭ ಆಗಿದ್ದು, ಇಂದು ನಗರದ ಬಿ.ಡಿ ರಸ್ತೆಯಲ್ಲಿರುವ ಜೈನ ಧಾಮದಲ್ಲಿ 18 ನೇ ವರ್ಷದ ಹಿಂದೂ ಮಹಾಗಣಪತಿಯ ಮಂಟಪಕ್ಕೆ ಭೂಮಿ ಹಾಗೂ ಗೋವಿನ ಪೂಜೆ ಮಾಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು. ಹಿಂದೂ ಮಹಾಗಣಪತಿ ಸಮಿತಿಯ ಅಧ್ಯಕ್ಷ ಶರಣ್ ಕುಮಾರ್ ನೇತೃತ್ವದಲ್ಲಿ ಪೂಜೆ ನೆರವೇರಿತು. ಪೂಜೆಯಲ್ಲಿ ಮಾಜಿ ಶಾಸಕ ತಿಪ್ಪಾರೆಡ್ಡಿ, ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ್ ಯಾದವ್ ಸೇರಿದಂತೆ ಬಿಜೆಪಿ ಹಾಗೂ ವಿಶ್ವ ಹಿಂದೂ ಪರಿಷತ್ ನ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.ಇನ್ನು ಆಗಸ್ಟ್ 27ರಂದು ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಆಗಲಿದ್ದು, ಈ ಬಾರಿ 18 ದಿನಗಳ ಕಾಲ ಅದ್ಧೂರಿಯಾಗಿ ಗಣೇಶೋತ್ಸವ ಆಚರಣೆಗೆ ನಿರ್ಧಾರ ಮಾಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



