ಇತ್ತೀಚೆಗೆ ಕ್ರಿಸ್ಟಿನ್ ಮ್ಯಾಥ್ಯೂ ಫಿಲಿಪ್ ಎಂಬುವರ X ಅಕೌಂಟ್ನಲ್ಲಿ ಬೆಂಗಳೂರು ನಗರದ ಬಗ್ಗೆ ‘ನಗರದಲ್ಲಿ ರಸ್ತೆ ಅವ್ಯವಸ್ಥೆ, ಗುಂಡಿಗಳ ಕಾರಣದಿಂದ ನಗರದ ಹೊರ ವಲಯದ ರಸ್ತೆಯಿಂದ ಸ್ಟಾರ್ಟ್ಅಪ್ಗಳು ಹಾಗೂ ಉದ್ಯಮ ಕಂಪನಿಗಳು ಬೆಂಗಳೂರಿನ ಉತ್ತರದ ಕಡೆಗೆ ಹಾಗೂ ವೈಟ್ಫೀಲ್ಡ್ ಕಡೆ ಮುಖಮಾಡುತ್ತಿವೆ ಎಂದು ಬರೆಯಲಾಗಿತ್ತು. ಕಂಪನಿಗಳಿಗೆ ಆಂಧ್ರಪ್ರದೇಶ ಸರ್ಕಾರ ಮತ್ತೆ ಆಹ್ವಾನ ನೀಡಿದ್ದು, ಇದಕ್ಕೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.ಈ ಪೋಸ್ಟ್ ಗೆ ಪ್ರತಿಕ್ರಿಯಿಸಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿಗಳ ಮಗ, ಹಾಲಿ ಸಚಿವ ನಾರಾ ಲೋಕೇಶ್ ಬೆಂಗಳೂರು ಉತ್ತರದ ಕಡೆಗೆ ಸ್ವಲ್ಪ ಚೆನ್ನಾಗಿದೆ. ಇನ್ನೂ ಸ್ವಲ್ಪ ಉತ್ತರಕ್ಕೆ ಬನ್ನಿ. ಅನಂತಪುರದಲ್ಲಿ ಚೆನ್ನಾಗಿದೆ ಎಂದಿದ್ದರು. ನಮ್ಮಲ್ಲಿ ವಿಶ್ವದರ್ಜೆಯ ಏರೋಸ್ಪೇಸ್ ಮತ್ತು ಡಿಫೆನ್ಸ್ ಎಕೋಸಿಸ್ಟಂ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ ಎಂದು ಪ್ರತಿಕ್ರಿಯಿಸುವ ಮೂಲಕ ಆಂಧ್ರಪ್ರದೇಶದಲ್ಲಿ ನಡೆದಿರುವ ಕೆಲಸಗಳನ್ನು ಉಲ್ಲೇಖಿಸಿ ಬೆಂಗಳೂರನ್ನು ಕೇಂದ್ರಿಕರಿಸಿರುವ ಐಟಿ ಉದ್ಯಮಿಗಳಿಗೆ ಆಹ್ವಾನ ನೀಡಿದ್ದರು.ನಾರಾ ಲೋಕೇಶ್ ಅವರ ಈ ಪ್ರತಿಕ್ರಿಯೆಗೆ ತಿರುಗೇಟು ನೀಡಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ದುರ್ಬಲ ವ್ಯವಸ್ಥೆಯಲ್ಲು ಇರುವವರು ವ್ಯವಸ್ಥೆಯನ್ನು ಸುಧಾರಿಸಲು ಪ್ರಯತ್ನಿಸುವುದು ಸಾಮಾನ್ಯ. ಆ ಪ್ರಯತ್ನ ಹತಾಶೆಯ ಹಂತಕ್ಕೆ ಹೋದಾಗ ಅದು ಮತ್ತಷ್ಟು ದುರ್ಬಲವಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







