ಚಿತ್ರದುರ್ಗ: ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆಯಡಿಯಲ್ಲಿ ಹುಲ್ಲೂರು, ಸಿಂಗಾಪುರ, ಹುಲ್ಲೂರು ನಾಯಕರಹಟ್ಟಿ ಗ್ರಾಮಗಳಲ್ಲಿಶಾಸಕ ಕೆ.ಸಿ.ವೀರೇಂದ್ರ ಪಪ್ಪಿರವರು ಸಿ.ಸಿ.ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
ಸಲ್ಲಿಸಿದರು.ಹುಲ್ಲೂರು ಗ್ರಾಮದಲ್ಲಿ ಐವತ್ತು ಲಕ್ಷ ರೂ. ಸಿಂಗಾಪುರ ಹಾಗೂ ಹುಲ್ಲೂರು ನಾಯಕರಹಟ್ಟಿಯಲ್ಲಿ ತಲಾ ಹತ್ತು ಲಕ್ಷ ರೂ.ಗಳವೆಚ್ಚದಲ್ಲಿರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು ನಿಗಧಿತ ಸಮಯದಲ್ಲಿ ಕಾಮಗಾರಿಗಳನ್ನುಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.ಹುಲ್ಲೂರು ಗ್ರಾಮ ಪಂಚಾಯಿತಿ ಮುಖಂಡ ಹೆಚ್.ಎಂ.ಮಂಜುನಾಥ್, ಕಲ್ಲೇಶ್, ಸ್ವಾಮಿ, ರವಿಕುಮಾರ್, ಯೋಗೀಶ್, ನಯನಹಾಗೂ ಗ್ರಾಮದ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



