ಚಿತ್ರದುರ್ಗ: ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಕುಟುಂಬಕ್ಕೆಕಳಂಕ ತರುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿ ವಿವಿಧ ಹಿಂದೂ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಶ್ರೀಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯ ಮೂಲಕ ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿವರೆಗೆ ಬೃಹತ್ ಪ್ರತಿಭಟನಾಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರತಿಭಟನಾ ಧರಣಿ ನಡೆಸಿಯಾವುದೇ ರೀತಿಯ ಸಾಕ್ಷಿ ಆಧಾರಗಳು ಇಲ್ಲದೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಡೆ ಅವರ ವಿರುದ್ದ ಅಪಪ್ರಚಾರನಡೆಸುತ್ತಿರುವ ಧರ್ಮವಿರೋದಿಗಳ ವಿರುದ್ದ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತುಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಮಾಜಕ್ಕೆ ಹಾಗೂ ಬಡವರ ಉದ್ದಾರಕ್ಕೆ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಡೆ ಅವರು ಹಲವಾರುಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಸೇವೆ ಮಾಡುತ್ತಿದ್ದಾರೆ. ಇದನ್ನು ಸಹಿಸದ ಧರ್ಮವಿರೋದಿಗಳ ಗುಂಪು ಷಡ್ಯಂತರರೂಪಿಸಿ ಸಂಬಂಧ ಇಲ್ಲದ ಯಾವುದೋ ಪ್ರಕರಣಗಳನ್ನು ಕೆದಕುತ್ತಿದ್ದಾರೆ. ಅಲ್ಲದೆ ಯಾವುದೇ ರೀತಿಯ ಸಾಕ್ಷಿ ಆಧಾರಗಳು ಇಲ್ಲದೆಇದ್ದರು ಕೂಡ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಡೆ ಅವರ ವಿರುದ್ದ ಅಪಪ್ರಚಾರ ನಡೆಸುತ್ತಿರುವ ಇದರಿಂದ ಶ್ರೀ ಕ್ಷೇತ್ರದಭಕ್ತರಿಗೆ ಅಪಾರವಾದ ನೋವುಉಂಟಾಗಿದೆ. ಆದ್ದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಡೆ ಅವರ ವಿರುದ್ದ ಅಪಪ್ರಚಾರನಡೆಸುತ್ತಿರುವ ಧರ್ಮವಿರೋದಿಗಳ ವಿರುದ್ದ ಸರ್ಕಾರ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಶ್ರೀ ಧರ್ಮಸ್ಥಳ ಅಭಿಮಾನಿ ವೇದಿಕೆಯ ಕಾರ್ಯಾಧ್ಯಕ್ಷರಾದ ನಾಗರಾಜ್ ಸಂಗಮ್ ಮಾತನಾಡಿ, ಹಿಂದುಗಳ ಶ್ರದ್ಧಾ ಕೇಂದ್ರಧರ್ಮಸ್ಥಳದಲ್ಲಿ ತನಿಖೆಯ ಹೆಸರಲ್ಲಿ ನಡೆಯುತ್ತಿರುವ ಧರ್ಮ ದ್ರೋಹಿ ಚಟುವಟಿಕೆಗಳು ಕೂಡಲೇ ಸ್ಥಗಿತಗೊಳ್ಳಬೇಕು ಎಸ್ಐಟಿನಡೆಸುತ್ತಿರುವ ತನಿಖೆ ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ ಶ್ರದ್ಧೆಗೆ ಅಪಚಾರ ಎತ್ತಾಗುವಂತಿದೆ. ಅಸಮರ್ಪಕವಾದ ತನಿಕೆಯನ್ನುಕೂಡಲೇ ಸ್ಥಗಿತಗೊಳಿಸಿ ಇಲ್ಲಿಯವರೆಗೆ ನಡೆಸಿರುವ ತನಿಖೆಯ ಕುರಿತು ಮಧ್ಯಂತರ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕುಎಂದು ಒತ್ತಾಯಿಸಿದರು.ಪಿಎಫ್ಐ ಸೇರಿದಂತೆ ಮತಾಂತರ ಶಕ್ತಿಗಳು ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಅಪಪ್ರಚಾರದಲ್ಲಿ ತೊಡಗಿದ್ದು ಸದ್ಯ ನಡೆಯುತ್ತಿರುವತನಿಖೆ ಕೂಡ ಅದಕ್ಕೆ ಪುಷ್ಟಿ ಕೊಡುವಂತಿದೆ. ಅನಾಮಿಕ ದೂರುದಾರನ ಹೆಸರಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ಶ್ರೀ ಕ್ಷೇತ್ರಧರ್ಮಸ್ಥಳದ ತೇಜೋವದೆ ಮಾಡಲಾಗುತ್ತಿದೆ. ಸರ್ಕಾರದ ಇಂತಹ ವ್ಯವಸ್ಥೆ ಧರ್ಮಸ್ಥಳದ7 ಅಸಂಖ್ಯಾತ ಭಕ್ತರು ಹಾಗೂ ಹಿಂದುಗಳಿಗೆನೋವು ತರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಹಾಗೂ ಕಾರ್ಮಿಕ ಕೇಂದ್ರಗಳ ಮೇಲೆ ನಡೆಯುತ್ತಿರುವ ವ್ಯವಸ್ಥಿತ ಅಪಪ್ರಚಾರವನ್ನು ಸಹಿಸಲುಸಾಧ್ಯವಿಲ್ಲ. ತಕ್ಷಣ ಸರ್ಕಾರ ಧರ್ಮಸ್ಥಳ ಕ್ಷೇತ್ರದ ಗೌರವ ಸಂರಕ್ಷಣೆ ಮಾಡುವ ಕೆಲಸಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿಇಂದಿನ ಹೋರಾಟ ಬರೀ ಶ್ಯಾಂಪಲ್ ಅಷ್ಟೇ. ರಾಜ್ಯಾದ್ಯಂತ ಒಂದು ಕೋಟಿಗೂ ಹೆಚ್ಚುಜನ ಸೇರಿ ಪ್ರತೀ ತಾಲ್ಲೂಕಿನಲ್ಲೂಅಪಪ್ರಚಾರದ ವಿರುದ್ಧ ಹೋರಾಟ ಮಾಡುತ್ತೇವೆ. ಹಿಂದೂಗಳು ತಿರುಗಿನಿಂತರೆ ಪರಿಣಾಮ ಬೇರೆಯೇ ಆಗುತ್ತದೆ. ಧರ್ಮಸ್ಥಳವನ್ನುಉಳಿಸಿಕೊಳ್ಳುವುದು ನಮಗೆ ಗೊತ್ತಿದೆ ಎಂದು ಎಚ್ಚರಿಕೆ ನೀಡಿದರುಶ್ರೀ ಧರ್ಮಸ್ಥಳ ಅಭಿಮಾನಿ ವೇದಿಕೆಯ ಅದ್ಯಕ್ಷರಾದ ರೂಪಾ ಜನರ್ಧನ್ ಮಾತನಾಡಿ ಎಲ್ಲರಿಗೂ ಒಳಿತನ್ನು ಬಯಸುವ ವೀರೇಂದ್ರಹೆಗ್ಗಡೆಯವರ ಕುಟುಂಬಕ್ಕೆ ಅನಾಮಿಕನ ಹೆಸರಿನಲ್ಲಿ ಮಾನಸಿಕ ತೊಂದರೆಯನ್ನು ಕೊಡುತ್ತಿರುವ ಧರ್ಮಸ್ಥಳದ ಬಗ್ಗೆ ಅಪಪ್ರಚಾರಮಾಡುತ್ತಿರುವ ಎಲ್ಲಾ ದುಷ್ಟಶಕ್ತಿಗಳಿಗೂ ತಕ್ಕ ಉತ್ತರ ಹಿಂದೂಗಳು ನೀಡುತ್ತಾರೆ ಧಾರ್ಮಿಕ ಕೇಂದ್ರಗಳ ಶಕ್ತಿ ಕುಗ್ಗಿಸುವ ಕೆಲಸ ಎಲ್ಲಿನಡೆಯುತ್ತಿದೆಯೋ ಅಲ್ಲಿ ಜಾಗೃತಿ ಸಮಾವೇಶ ಹಮ್ಮಿಕೊಂಡು, ಹಿಂದೂ ಧಾರ್ಮಿಕ ಕ್ಷೇತ್ರಗಳ ಸಂರಕ್ಷಣೆ ಮಾಡಲು ಪ್ರಾರಂಭಿಸಿದೆಎಂದರು.
ಶ್ರೀ ಧರ್ಮಸ್ಥಳ ಅಭಿಮಾನಿ ವೇದಿಕೆಯ ಕಾರ್ಯಾಧ್ಯಕ್ಷರಾದ ಸಿ.ಬಿ.ನಾಗರಾಜ್ ದೇವರಾಜು ಅರಸು ವಿದ್ಯಾ ಸಂಸ್ಥೆಯಆಡಳಿತಾಧಿಕಾರಿ ರಘು ಚಂದನ್, ವೀರಶೈವ ಮುಖಂಡರಾದ ಕೆಇಬಿ ಷಣ್ಮುಖಪ್ಪ, ಜೀತೇಂದ್ರ ಹುಲಿಕುಂಟೆ, ಲೀಲಾಧರ್ ಠಾಕೂರ್,ತಿಮ್ಮಣ್ಣ ಸೇರಿದಂತೆ ಅಪಾರ ಭಕ್ತ ವೃಂದಾ ಭಾಗವಹಿಸಿದ್ದರು.ನಗರದ ಹಳೇ ಮಾಧ್ಯಮಿಕ ಶಾಲೆಯ ಬಳಿಯಿಂದ ಹೊರಟ ಜಾಥ ಜಿಲ್ಲಾಧಿಕಾರಿಗಳ ಕಛೇರಿಗೆ ತಲುಪಿ ಸರಕಾರಕ್ಕೆ ಮನವಿಸಲ್ಲಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







