ಚಿತ್ರದುರ್ಗ: ಗ್ರಾಮ ಪಂಚಾಯಿತಿ ನೌಕರರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ
ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಜಿಲ್ಲಾ ಶಾಖೆಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ
ಕಾರ್ಮಿಕ ಇಲಾಖೆ ಅಧಿಕಾರಿ ಮೂಲಕ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಲಾಯಿತು.ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಕಾರ್ಮಿಕ ಇಲಾಖೆಗೆ ತೆರಳಿದ ಪ್ರತಿಭಟನಾಕಾರರು ಕನಿಷ್ಠ ವೇತನ ನೀಡದ ರಾಜ್ಯಸರ್ಕಾರದ ವಿರುದ್ದ ಧಿಕ್ಕಾರ ಕೂಗಿದರು.ಸಿಐಟಿಯು ಜಿಲ್ಲಾ ಸಂಚಾಲಕಿ ಎನ್. ನಿಂಗಮ್ಮ ಮಾತನಾಡಿ ಗ್ರಾಮ ಪಂಚಾಯಿತಿ ನೌಕರರಿಗೆ
ತಿಂಗಳಿಗೆ 36 ಸಾವಿರ ರೂಪಾಯಿಗಳ ವೇತನ ನಿಗದಿಪಡಿಸಿ ಪ್ರತಿ ತಿಂಗಳು ಐದನೆ ತಾರೀಖಿನೊಳಗೆ ಪಾವತಿಸಬೇಕು. ಬಿಲ್
ಕಲೆಕ್ಟರ್‍ಗಳಿಗೆ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಬೇಕು. ಸ್ವಚ್ಛವಾಹಿನಿಯವರಿಗೆ ವರ್ಷಗಟ್ಟಲೆ ಸಂಬಳ ನೀಡಿಲ್ಲ. ಕೂಡಲೇ ವೇತನಪಾವತಿಸಿ ಸ್ವಚ್ಛತೆಗಾಗಿ ವಾಹನ ನೀಡಿ ಗ್ರಾಮ ಪಂಚಾಯಿತಿ ನೌಕರರೆಂದು ಪರಿಗಣಿಸುವಂತೆ ಮನವಿ ಮಾಡಿದರು.
ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಡಿ.ಎಂ.ಮಲಿಯಪ್ಪ ಮಾತನಾಡಿ ಗ್ರಾಮ ಪಂಚಾಯಿತಿಗಳಲ್ಲಿದುಡಿಯುತ್ತಿರುವ ಸಿಬ್ಬಂದಿಗಳಿಗೆ ಸೇವಾ ಹಿರಿತನದ ಮೇಲೆ ಮೂಲ ವೇತನಕ್ಕೆ ಶೇ. 2 ರಷ್ಟು ಹೆಚ್ಚಳ ಪ್ರತಿ ವರ್ಷ ಪರಿಗಣಿಸಿಹೆಚ್ಚುವರಿ ಭತ್ಯೆ ನೀಡಬೇಕು. ಸ್ವಚ್ಛವಾಹಿನಿ ಚಾಲಕರು ಮತ್ತು ಹೆಲ್ಪರ್‍ಗಳು ಗ್ರಾಮ ಪಂಚಾಯಿತಿಗಳಲ್ಲಿ ಹಗಲು-ರಾತ್ರಿದುಡಿಯುತ್ತಿದ್ದಾರೆ. ಸರ್ಕಾರಿ ಆದೇಶದಂತೆ ಇವರುಗಳಿಗೆ ಕಡ್ಡಾಯವಾಗಿ ವೇತನ ಪಾವತಿಸಿ ಹದಿನೈದು ಸಾವಿರ ರೂಪಾಯಿ ಸಂಬಳಹೆಚ್ಚಿಸಬೇಕೆಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಉಪಾಧ್ಯಕ್ಷ ವೆಂಕಟೇಶ್, ಖಜಾಂಚಿ ಶಿವಣ್ಣ, ಪ್ರಧಾನ ಕಾರ್ಯದರ್ಶಿರಂಗನಾಥ್, ಜಯಲಕ್ಷ್ಮಿ, ಮಾರಪ್ಪ, ಸಂತೋಷ್, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿಸಂಘದ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್ ಸೇರಿದಂತೆ ಗ್ರಾಮ ಪಂಚಾಯಿತಿ ನೌಕರರುಸ್ವಚ್ಚವಾಹಿನಿ ಚಾಲಕರು, ಹೆಲ್ಪರ್‍ಗಳುಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



