Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ನಿತ್ಯ ಭವಿಷ್ಯ – 10/04/2026 (ಶುಕ್ರವಾರ)

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು

ದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ; ಶೇ. 86 ವಿದ್ಯಾರ್ಥಿಗಳು ಪಾಸ್ 

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ವಿದ್ಯಾಲಯ»ಪಿಯು ಫಲಿತಾಂಶಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್: ಇನ್ನೂ ‘ಫೇಲ್’ ಅನ್ನೋ ಮಾತಿಲ್ಲ !
ವಿದ್ಯಾಲಯ

ಪಿಯು ಫಲಿತಾಂಶಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್: ಇನ್ನೂ ‘ಫೇಲ್’ ಅನ್ನೋ ಮಾತಿಲ್ಲ !

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 8, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಪಿಯು ಫಲಿತಾಂಶಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್: ಇನ್ನೂ ‘ಫೇಲ್’ ಅನ್ನೋ ಮಾತಿಲ್ಲ !

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಲಕ್ಷಾಂತರ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಫೇಲ್ ಆದರೆ? ಎಂಬ ಆತಂಕ ಮನೆ ಮಾಡಿರುವುದು ಸಹಜ. ಆದರೆ ಈ ಬಾರಿ ವಿದ್ಯಾರ್ಥಿಗಳಿಗೆ ದೊಡ್ಡ ಮಟ್ಟದ ನೆಮ್ಮದಿ ನೀಡುವ ಸುದ್ದಿಯೊಂದು ಹೊರಬಿದ್ದಿದೆ. ಕರ್ನಾಟಕ ಶಿಕ್ಷಣ ಮಂಡಳಿ ಜಾರಿಗೆ ತಂದಿರುವ ವಿದ್ಯಾರ್ಥಿ ಸ್ನೇಹಿ ಉತ್ತೀರ್ಣ ನಿಯಮಗಳಿಂದ ಈ ಬಾರಿ ‘ಫೇಲ್’ ಎನ್ನುವ ಭಯ ಬಹುತೇಕ ಕಡಿಮೆಯಾಗುವ ಸಾಧ್ಯತೆ ಇದೆ.

ಮಂಡಳಿಯ ಹೊಸ ನಿಯಮ ಪ್ರಕಾರ, ಪ್ರತಿ ವಿಷಯದಲ್ಲಿ ಉತ್ತೀರ್ಣರಾಗಲು ಕೇವಲ 30 ಅಂಕಗಳು ಸಾಕಾಗುತ್ತವೆ. ವಿಶೇಷವೆಂದರೆ ಈ 30 ಅಂಕಗಳಲ್ಲಿ ಥಿಯರಿ ಪರೀಕ್ಷೆಯ ಅಂಕಗಳ ಜೊತೆಗೆ ಕಾಲೇಜು ನೀಡುವ 20 ಅಂಕಗಳ ಆಂತರಿಕ ಮೌಲ್ಯಮಾಪನ ಕೂಡ ಸೇರಿರುತ್ತದೆ.

ಅಂದರೆ, ವಿದ್ಯಾರ್ಥಿಗೆ ಕಾಲೇಜಿನಿಂದ ಉತ್ತಮ ಆಂತರಿಕ ಅಂಕಗಳು ದೊರೆತಿದ್ದರೆ, ಥಿಯರಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೂ ಪಾಸ್ ಆಗುವ ಅವಕಾಶ ಹೆಚ್ಚುತ್ತದೆ. ಇದೇ ಕಾರಣದಿಂದ ಈ ಬಾರಿ ಸಾವಿರಾರು ವಿದ್ಯಾರ್ಥಿಗಳಿಗೆ ಫಲಿತಾಂಶದ ವೇಳೆ ದೊಡ್ಡ ಮಟ್ಟದ ನೆರವಾಗುವ ನಿರೀಕ್ಷೆ ಇದೆ.

ಒಟ್ಟು 600 ಅಂಕಗಳಲ್ಲಿ 198 ಅಂಕಗಳು (33%) ಗಳಿಸಿದರೆ ವಿದ್ಯಾರ್ಥಿ ಉತ್ತೀರ್ಣನಾಗಬಹುದು ಎಂಬ ನಿಯಮ ವಿದ್ಯಾರ್ಥಿಗಳ ಪಾಲಿಗೆ ದೊಡ್ಡ ಭರವಸೆಯಾಗಿದೆ. ಕಳೆದ ವರ್ಷಗಳಲ್ಲಿ ಕೆಲವೇ ಅಂಕಗಳ ಅಂತರದಿಂದ ಅನುತ್ತೀರ್ಣರಾಗುತ್ತಿದ್ದ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿಯ ಈ ಕ್ರಮ ಸಂಜೀವಿನಿಯಾಗಲಿದೆ ಎಂದು ಶಿಕ್ಷಣ ವಲಯದಲ್ಲಿ ಚರ್ಚೆಯಾಗುತ್ತಿದೆ.

ಈ ಕ್ರಮದ ಹಿಂದೆ ಸರ್ಕಾರದ ಮುಖ್ಯ ಉದ್ದೇಶ ವಿದ್ಯಾರ್ಥಿಗಳನ್ನು ಕೇವಲ ಪಾಸ್ ಮಾಡಿಸುವುದಲ್ಲ, ಬದಲಾಗಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಪದವಿ ಶಿಕ್ಷಣಕ್ಕೆ ಸೇರುವಂತೆ ಪ್ರೋತ್ಸಾಹಿಸುವುದಾಗಿದೆ. ನೆರೆಯ ರಾಜ್ಯಗಳೊಂದಿಗೆ ಹೋಲಿಸಿದರೆ ಕರ್ನಾಟಕದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದತ್ತ ಹೆಚ್ಚಿನ ಸಂಖ್ಯೆಯಲ್ಲಿ ಸಾಗಬೇಕು ಎಂಬ ಆಶಯದಿಂದ ಈ ರಿಯಾಯಿತಿ ನೀಡಲಾಗಿದೆ.

ಹೀಗಾಗಿ ವಿದ್ಯಾರ್ಥಿಗಳು ಫಲಿತಾಂಶದ ಬಗ್ಗೆ ಅನಗತ್ಯ ಆತಂಕಕ್ಕೆ ಒಳಗಾಗದೆ ಆತ್ಮವಿಶ್ವಾಸದಿಂದ ಎದುರುನೋಡಬಹುದು. ಮಂಡಳಿಯ ಹೊಸ ನಿಯಮ ಈ ಬಾರಿ ಅನೇಕ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ‘PASS’ ಎಂಬ ಪದವನ್ನು ರಾರಾಜಿಸುವಂತೆ ಮಾಡುವ ಸಾಧ್ಯತೆ ಹೆಚ್ಚಿದೆ.

Exam karanataka Puc ಪಿಯುಸಿ ಫಲಿತಾಂಶ ಫೇಲ್
Follow on Facebook Follow on Instagram
Share. Facebook Twitter WhatsApp Telegram
Previous Articleಮೆಡಿಕಲ್ ಕಾಲೇಜು ಊಹಾಪೋಹಕ್ಕೆ ಬಿತ್ತು ತೆರೆ; ಯಾವುದೇ ಗೊಂದಲ, ಬದಲಾವಣೆಯಿಲ್ಲ
Next Article ಕಲ್ಲೇಶ್ವರ ಸ್ವಾಮಿ ದೊಡ್ಡ ರಥೋತ್ಸವಕ್ಕೆ ಕ್ಷಣಗಣನೆ; ಕಲ್ಲೇದೇವರಪುರದಲ್ಲಿ ಭಕ್ತ ಸಮೂಹ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು

April 9, 2026

ದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ; ಶೇ. 86 ವಿದ್ಯಾರ್ಥಿಗಳು ಪಾಸ್ 

April 9, 2026

ಆಸ್ಪತ್ರೆಗೆ ಸಿಎಂ, ಡಿಸಿಎಂ; ಸಚಿವರ ಆರೋಗ್ಯ ವಿಚಾರಿಸಿ ಕುಟುಂಬಕ್ಕೆ ಧೈರ್ಯ ತುಂಬಿದ ನಾಯಕರು

April 9, 2026
Add A Comment
Leave A Reply Cancel Reply

Advertisement
Latest Posts

ನಿತ್ಯ ಭವಿಷ್ಯ – 10/04/2026 (ಶುಕ್ರವಾರ)

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು

ದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ; ಶೇ. 86 ವಿದ್ಯಾರ್ಥಿಗಳು ಪಾಸ್ 

ಆಭರಣ ಪ್ರಿಯರಿಗೆ ಸಿಹಿಸುದ್ದಿ!! ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ 

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.