ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು
ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ರಾಜ್ಯದ ಗಮನ ಸೆಳೆದಿದೆ.
ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ ಅಪೂರ್ವ ಸಾಧನೆ ಮಾಡಿದ್ದಾರೆ.
ಈ ಅದ್ಭುತ ಸಾಧನೆಯೊಂದಿಗೆ ದಿಶಾ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ರಾಜ್ಯ ಮಟ್ಟದಲ್ಲಿ ಮತ್ತೊಮ್ಮೆ ಉಜ್ವಲಗೊಳಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ನಿರಂತರ ಮೇಲುಗೈ ಮತ್ತೊಮ್ಮೆ ಸಾಬೀತಾಗಿದೆ.
ಇನ್ನೊಂದೆಡೆ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ವಿದ್ಯಾರ್ಥಿನಿಯರಾದ ಸಂಗೀತಾ ಮತ್ತು ಅರ್ಚನಾ ಕಲಾ ವಿಭಾಗದಲ್ಲಿ ತಲಾ 598 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಇವರ ಸಾಧನೆಯೂ ರಾಜ್ಯದ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.
ರಾಜ್ಯ ಮಟ್ಟದ ಈ ಫಲಿತಾಂಶದಲ್ಲಿ ಕರಾವಳಿ ಕರ್ನಾಟಕದ ಪ್ರತಿಭೆ ಮತ್ತೊಮ್ಮೆ ಮೆರೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ತನ್ನ ಮೇಲುಗೈ ಮುಂದುವರಿಸಿದೆ.
