ಮತ ವಂಚನೆ: ಚುನಾವಣಾ ಆಯೋಗದ ವಿರುದ್ಧ ಆ.04 ರಂದು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪ್ರತಿಭಟನೆಮಹಾರಾಷ್ಟ್ರದಂತೆ ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲೂ ಚುನಾವಣಾ ಆಯೋಗವು ಮತ ವಂಚನೆಗೆ ಅವಕಾಶ ನೀಡಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಆಗಸ್ಟ್ 4 ರಂದು ಬೆಂಗಳೂರಿನಲ್ಲಿ ಚುನಾವಣಾ ಆಯೋಗ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ನಗರದಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ಈ ಪಾದಯಾತ್ರೆ ನಡೆಯಲಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಲಿರುವ ಪ್ರತಿಭಟನೆಯನ್ನು “ತಮಾಷೆ” ಎಂದು ಬಣ್ಣಿಸಿರುವ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ಚುನಾವಣಾ ಅಕ್ರಮ ನಡೆಯಲು ಸಾಧ್ಯವಾಗಿದ್ದರೆ, ಬಹುಶಃ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುತ್ತಿತ್ತು ಎಂದು ಹೇಳಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



