Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ

ಕರಿಯಪ್ಪ ಮಾಳಿಗೆ ನೆಲದ ಮಗ ; ಸಂಶೋಧನೆಯ ಹಾದಿಯಲ್ಲಿ ಮಣ್ಣಿನ ಗುಣ ಹುಡುಕಿದ ಚಿಂತಕ

ರೈತ ಸಮೃದ್ಧಿಯಾಗಿದ್ದರೆ ದೇಶವು ಕೂಡ ಸಮೃದ್ಧಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ರಾಯಚೂರಿಗೆ 13ನೇ ಕೆಎಸ್‌ಆರ್‌ಪಿ ಪಡೆ ಸ್ಥಾಪನೆಗೆ ಒತ್ತಾಯ ಯುವ ಹೋರಾಟಗಾರ ಅರುಣ್ ಭೂಪಾಲ್ ಅವರಿಂದ ಸಿಎಂಗೆ ಬಹಿರಂಗ ಪತ್ರ
ರಾಜ್ಯ

ರಾಯಚೂರಿಗೆ 13ನೇ ಕೆಎಸ್‌ಆರ್‌ಪಿ ಪಡೆ ಸ್ಥಾಪನೆಗೆ ಒತ್ತಾಯ ಯುವ ಹೋರಾಟಗಾರ ಅರುಣ್ ಭೂಪಾಲ್ ಅವರಿಂದ ಸಿಎಂಗೆ ಬಹಿರಂಗ ಪತ್ರ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿFebruary 12, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}
Share
WhatsApp Twitter Facebook Telegram

*ರಾಯಚೂರಿಗೆ 13ನೇ ಕೆಎಸ್‌ಆರ್‌ಪಿ ಪಡೆ ಸ್ಥಾಪನೆಗೆ ಒತ್ತಾಯ ಯುವ ಹೋರಾಟಗಾರ ಅರುಣ್ ಭೂಪಾಲ್ ಅವರಿಂದ ಸಿಎಂಗೆ ಬಹಿರಂಗ ಪತ್ರ*

ರಾಯಚೂರು ಜಿಲ್ಲೆಯಲ್ಲಿ 13ನೇ ಕೆಎಸ್‌ಆರ್‌ಪಿ ಪಡೆಯನ್ನು ಸ್ಥಾಪಿಸಬೇಕೆಂದು ಯುವ ಹೋರಾಟಗಾರ ಅರುಣ್ ಭೂಪಾಲ್ ಅವರು ಮುಖ್ಯಮಂತ್ರಿ ಅವರಿಗೆ ಬಹಿರಂಗ ಪತ್ರ ಬರೆದು ಒತ್ತಾಯಿಸಿದ್ದಾರೆ. ಈ ಪತ್ರ ಖಾಕಿ ವಲಯ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ಭದ್ರತಾ ಪರಿಸ್ಥಿತಿಯನ್ನು ಉಲ್ಲೇಖಿಸಿರುವ ಅವರು, “ಮಹಾನಗರಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ಮೀಸಲಿಡುವ ಸರ್ಕಾರ, ಗಡಿಭಾಗದ ಜಿಲ್ಲೆಗಳಿಗೆ ಕನಿಷ್ಠ ಭದ್ರತಾ ವ್ಯವಸ್ಥೆ ಒದಗಿಸಲು ಯಾಕೆ ಹಿಂದೇಟು ಹಾಕುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳು ಆಂಧ್ರ–ತೆಲಂಗಾಣ ಗಡಿಭಾಗಕ್ಕೆ ಹೊಂದಿಕೊಂಡಿರುವುದರಿಂದ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಶಾಶ್ವತ ಕೆಎಸ್‌ಆರ್‌ಪಿ ಪಡೆಯ ಅಗತ್ಯವಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ. ವಿ.ವಿ.ಐ.ಪಿ ಭೇಟಿಗಳು, ರಾಜಕೀಯ ಸಮಾವೇಶಗಳು, ಧಾರ್ಮಿಕ ಜಾತ್ರೆಗಳು, ಹಟ್ಟಿ ಚಿನ್ನದ ಗಣಿ, ಶಕ್ತಿನಗರ ವಿದ್ಯುತ್ ಉತ್ಪಾದನಾ ಘಟಕ ಹಾಗೂ ಉದ್ದೇಶಿತ ವಿಮಾನ ನಿಲ್ದಾಣದ ಹಿನ್ನೆಲೆಯಲ್ಲಿ ಭದ್ರತಾ ಸವಾಲು ಹೆಚ್ಚುತ್ತಿದೆ ಎಂದು ಅವರು ತಿಳಿಸಿದ್ದಾರೆ.

ತುರ್ತು ಸಂದರ್ಭಗಳಲ್ಲಿ ಕಲಬುರಗಿ ಅಥವಾ ಮುನಿರಾಬಾದ್‌ನಿಂದ ಪಡೆ ಬರಲು ನಾಲ್ಕು ಗಂಟೆಗಳವರೆಗೆ ಸಮಯ ಹಿಡಿಯುತ್ತಿರುವುದು ಆತಂಕಕಾರಿ ಎಂದು ಅರುಣ್ ಭೂಪಾಲ್ ಅಭಿಪ್ರಾಯಪಟ್ಟಿದ್ದಾರೆ.

ಕಲ್ಯಾಣ ಕರ್ನಾಟಕದ 25 ಶಾಸಕರು ಒಟ್ಟಾಗಿ ಮನವಿ ಸಲ್ಲಿಸಿದ್ದರೂ ಹಣಕಾಸು ಇಲಾಖೆ ಎರಡನೇ ಬಾರಿ ಪ್ರಸ್ತಾವನೆ ತಿರಸ್ಕರಿಸಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಅಗತ್ಯ ಭೂಮಿ ಹಾಗೂ ಅನುದಾನದ ವ್ಯವಸ್ಥೆ ಇದ್ದರೂ ಅನುಮತಿ ನೀಡದಿರುವುದನ್ನು ಅವರು ಪ್ರಶ್ನಿಸಿದ್ದಾರೆ.

ಐಆರ್‌ಬಿ–ಕೆಎಸ್‌ಆರ್‌ಪಿ ಪ್ರತ್ಯೇಕೀಕರಣದ ನಂತರ ಕಲ್ಯಾಣ ಕರ್ನಾಟಕ ಮೀಸಲಾತಿಯಲ್ಲಿ ನೇಮಕವಾದ ಸಿಬ್ಬಂದಿಗೆ ಪದೋನ್ನತಿ ಸಿಗದೆ ನಿವೃತ್ತಿಯಾಗುತ್ತಿರುವ ವಿಚಾರವನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.ರಾಜ್ಯ ಬಜೆಟ್‌ನಲ್ಲಿ ರಾಯಚೂರಿನಲ್ಲಿ 13ನೇ ಕೆಎಸ್‌ಆರ್‌ಪಿ ಪಡೆಯ ಘೋಷಣೆ ಮಾಡಬೇಕು. ಇದು ಕೇವಲ ಒತ್ತಾಯವಲ್ಲ, ಸಂವಿಧಾನಬದ್ಧ ಹಕ್ಕು ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಸರ್ಕಾರದ ಪ್ರತಿಕ್ರಿಯೆ ನಿರೀಕ್ಷಿಸಲಾಗುತ್ತಿದೆ.

Arun Bhopal goverment karnataka Raichur ರಾಯಚೂರು ಸಿಎಂ ಸಿದ್ದರಾಮಯ್ಯ
Follow on Facebook Follow on Instagram
Share. Facebook Twitter WhatsApp Telegram
Previous Articleರಾಜಕಾರಣದಲ್ಲಿ ಇರುವವರು ರಾಜಕಾರಣ ಮಾಡಲೇ ಬೇಕು: ಡಿ ಕೆ ಶಿವಕುಮಾರ್
Next Article ಆರೋಗ್ಯವನ್ನು ಆಲಸ್ಯತನದಿಂದ ಹಾಳು ಮಾಡಿಕೊಳ್ಳಬೇಡಿ ಕಾಯಕಯೋಗಿ ಜಗದ್ಗುರು ಶ್ರೀ ಶಾಂತಿವೀರ ಸ್ವಾಮೀಜಿ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ರೈತ ಸಮೃದ್ಧಿಯಾಗಿದ್ದರೆ ದೇಶವು ಕೂಡ ಸಮೃದ್ಧಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

March 29, 2026

ಕರುನಾಡಿನ ಜಲಋಷಿ – ರಾಜಸ್ಥಾನದ ಜಲರಕ್ಷಕ: ದೆಹಲಿಯಲ್ಲಿ ಜಲ ಸಂರಕ್ಷಣೆಯ ಮಹಾ ಸಂವಾದ

March 29, 2026

ನ್ಯಾಯದಲ್ಲಿ ರಾಜಿ ಬೇಡ: ಪೊಲೀಸರಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

March 29, 2026
Add A Comment
Leave A Reply Cancel Reply

Advertisement
Latest Posts

ರಾಷ್ಟ್ರಮಟ್ಟಕ್ಕೆ ಆರ್‌.ವೈಷ್ಣವಿ ಆಯ್ಕೆ

ಕರಿಯಪ್ಪ ಮಾಳಿಗೆ ನೆಲದ ಮಗ ; ಸಂಶೋಧನೆಯ ಹಾದಿಯಲ್ಲಿ ಮಣ್ಣಿನ ಗುಣ ಹುಡುಕಿದ ಚಿಂತಕ

ರೈತ ಸಮೃದ್ಧಿಯಾಗಿದ್ದರೆ ದೇಶವು ಕೂಡ ಸಮೃದ್ಧಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

ಕರುನಾಡಿನ ಜಲಋಷಿ – ರಾಜಸ್ಥಾನದ ಜಲರಕ್ಷಕ: ದೆಹಲಿಯಲ್ಲಿ ಜಲ ಸಂರಕ್ಷಣೆಯ ಮಹಾ ಸಂವಾದ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.