ಕೂಲಿ ಸಿನಿಮಾದ ಯಶಸ್ಸಿನ ನಂತರ ಅಧ್ಯಾತ್ಮಿಕ ಪ್ರವಾಸದ ನಿಮಿತ್ತ ಹಿಮಾಲಯಕ್ಕೆ ತೆರಳಿರುವ ಸೂಪರ್ ಸ್ಟಾರ್ ರಜನಿಕಾಂತ್ ಗಂಗಾ ನದಿ ಸ್ನಾನದೊಂದಿಗೆ ಬೀದಿ ಬದಿಯಲ್ಲೇ ಊಟ ಮಾಡುತ್ತಾ ಪ್ರವಾಸ ಎಂಜಾಯ್ ಮಾಡುತ್ತಿದ್ದಾರೆ. ಬೀದಿ ಬದಿಯಲ್ಲೇ ಸರಳವಾಗಿ ಊಟ ಮಾಡುತ್ತಿರುವ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.ರಿಷಿಕೇಶದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿರುವ ರಜನಿಕಾಂತ್ ಗೌರವ ಸಲ್ಲಿಸಿ, ಗಂಗಾ ನದಿ ತಟದಲ್ಲಿ ಧ್ಯಾನಕ್ಕೆ ಕೂತು, ಗಂಗಾ ಆರತಿಯಲ್ಲಿ ಭಾಗವಹಿಸಿದ್ದರು. ನಂತರ ಪ್ರಯಾಣದ ನಡುವೆ ರಸ್ತೆ ಪಕ್ಕದ ತಡೆಗೋಡೆ ಮೇಲೆಯೆ ಅಡಿಕೆ ಎಲೆಯ ತಟ್ಟೆಯಲ್ಲಿ ರಜನಿಕಾಂತ್ ಊಟ ಮಾಡುತ್ತಿರುವ ಫೋಟೊ ವೈರಲ್ ಆಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







