ಸೂಪರ್ ಸ್ಟಾರ್ ‘ರಜನಿಕಾಂತ್’ ಕೂಲಿ ಸಿನಿಮಾದ ಯಶಸ್ಸಿನ ನಂತರ ದಿಢೀರ್ ಹಿಮಾಲಯಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಆಗಸ್ಟ್ 14ರಂದು ಬಿಡುಗಡೆಯಾಗಿದ್ದ ಲೋಕೇಶ್ ಕನಗರಾಜ್ ನಿರ್ದೇಶನದ ಕೂಲಿ ಸಿನಿಮಾ ಹಿಟ್ ಆಗಿತ್ತು. ಇದು 500 ಕೋಟಿ ಗಳಿಕೆ ಮಾಡಿದೆ ಎಂಬ ವರದಿಗಳು ಹರಿದಾಡುತ್ತಿವೆ. ಈ ಯಶಸ್ಸಿನ ನಂತರ ರಜನೀಕಾಂತ್ ನೆಲ್ಸನ್ ದಿಲೀಪಕುಮಾರ್ ನಿರ್ದೇಶಿಸುತ್ತಿರುವ ‘ಜೈಲರ್ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮುಂದಿನ ವರ್ಷ ಜೂನ್ ವೇಳೆಗೆ ಈ ಸಿನಿಮಾ ತೆರೆಗೆ ಬರಲಿದೆ ಎಂದು ಸ್ವತಃ ರಜನಿ ಅವರೇ ಹೇಳಿದ್ದಾರೆ. ಈ ನಡುವೆ ಪ್ರತಿ ಸಿನಿಮಾ ಚಿತ್ರೀಕರಣದ ನಂತರ ವಿಶ್ರಾಂತಿಗಾಗಿ ಹಿಮಾಲಯಕ್ಕೆ ಪ್ರಯಾಣ ಬೆಳೆಸುವಂತೆ ಈ ಸಾರಿಯು ಪ್ರಯಾಣ ಬೆಳೆಸಿದ್ದಾರೆ. ಒಂದು ವಾರದ ಅವರ ಹಿಮಾಲಯ ಪ್ರವಾಸದ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







