ಚಿತ್ರದುರ್ಗ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹುಟ್ಟುಹಬ್ಬದ ಹಿನ್ನಲೆ ಇಂದು ಚಿತ್ರದುರ್ಗದ ಗೋನೂರು ನಿರಾಶ್ರಿತರ ಕೇಂದ್ರದಲ್ಲಿ ಸಚಿವರ ಬೆಂಬಲಿಗರು, ಅಭಿಮಾನಿಗಳು ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಬರ್ತಡೇ ಆಚರಿಸಿದರು.
ಇನ್ನು ನಿರಾಶ್ರಿತರ ಕೇಂದ್ರದಲ್ಲಿ ರೆಡ್ಡಿ ಸಮುದಾಯದ ವತಿಯಿಂದ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಲಾಯಿತು. ಈ ವೇಳೆ ನಿರಾಶ್ರಿತರ ಕೇಂದ್ರದಲ್ಲಿನ ನಿರಾಶ್ರಿತರಿಗೆ ಹಣ್ಣು ಹಂಪಲು ಹಾಗೂ ಬಟ್ಟೆ ವಿತರಣೆ ಮಾಡಲಾಯಿತು. ರೆಡ್ಡಿ ಸಮುದಾಯದಿಂದ ನಡೆದ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ ರವರಿಗೆ ಹುಟ್ಟುಹಬ್ಬದ ಶುಭ ಕೋರಿದ್ರು. ಈ ವೇಳೆ ತಾಲೂಕಿನ ರೆಡ್ಡಿ ಸಮುದಾಯದ ಮುಖಂಡರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



