ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿನ ‘ದಿ ರಾಮೇಶ್ವರಂ ಕೆಫೆ’ಯಲ್ಲಿನ ಪೊಂಗಲ್‌ನಲ್ಲಿ ಕೀಟ ಪತ್ತೆಯಾಗಿದೆ ಎಂಬ ಆರೋಪದ ವಿಡಿಯೊ ವೈರಲ್ ಆದ ಬೆನ್ನಲ್ಲೇ 6 ಸ್ಪಷ್ಟಿಕರಣ ನೀಡಿರುವ ಕೆಫೆ ಆಡಳಿತ ಮಂಡಳಿ, ಆರೋಪವನ್ನು ನಿರಾಕರಿಸಿದೆ. ಕೆಫೆಯಲ್ಲಿ ನೀಡಿದ್ದ ಆಹಾರದಲ್ಲಿ ಕೀಟವಿದೆ ಎಂಬ ಸುಳ್ಳು ಆರೋಪ ಮಾಡಿದ್ದು, ಅಪರಿಚಿತರು 25 ಲಕ್ಷ ರೂ. ಸುಲಿಗೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಮೇಶ್ವರಂ ಕೆಫೆ ವತಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಏರ್‌ಪೋರ್ಟ್‌ನ ಕೆಫೆಗೆ ಬಂದಿದ್ದ ಕೆಲವರು ಅವರೇ ಆಹಾರದಲ್ಲಿ ಕೀಟವಿದೆ ಎಂದು ವಿಡಿಯೊ ಮಾಡಿ ತಗಾದೆ ತೆಗೆದಿದ್ದಾರೆ. ಬಳಿಕ ಹಣ ನೀಡದಿದ್ದರೆ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾರೆ. ಇದಕ್ಕೆ ಪೂರಕವಾಗಿ ಅಪರಿಚಿತನೊಬ್ಬಕರೆ ಮಾಡಿ 25 ಲಕ್ಷ ರೂ.ಗಳನ್ನು ಬ್ರಿಗೇಡ್ ರಸ್ತೆಗೆ ತಂದು ಕೊಡುವಂತೆ ಬೆದರಿಸಿದ್ದ. ಈ ಘಟನೆಗಳು ಸಂಸ್ಥೆಯ ವಿರುದ್ಧ ಮಾಡಿರುವ ಪಿತೂರಿಯಾಗಿದೆ ಎಂದು ತಿಳಿಸಿದೆ. ಅಲ್ಲದೆ, ಈ ಕುರಿತು ನಗರ ಪೊಲೀಸ್ ಆಯುಕ್ತರಿಗೆ ನೀಡಿರುವ ದೂರಿನ ಪತ್ರಿಯನ್ನು ಹಂಚಿಕೊಂಡಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



