ಸದಾ ಒಂದಲ್ಲೊಂದು ವಿವಾದಗಳಿಂದ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಈಗ ಮತ್ತೊಂದು ವಿವಾದದಲ್ಲಿ ಮೈಮೇಲೆ ಎಳೆದುಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತಾಡುವಾಗ ನನಗೆ ಮೊದಲ ಸಿನಿಮಾದ ಚೆಕ್ ಸಿಕ್ಕಾಗ ಮನೆಯವರೆಲ್ಲ ಏನು ಮಾತಾಡಿದ್ದಾರೆ ಅನ್ನೋದು ನೆನಪಿದೆ. ಕೂರ್ಗ್ ಸಮುದಾಯದಿಂದ ಚಿತ್ರರಂಗಕ್ಕೆ ಮೊದಲು ಎಂಟ್ರಿ ಕೊಟ್ಟಿದ್ದು ನಾನು ಎಂದು ಹೇಳುವ ಮೂಲಕ ವಿವಾದ ಸೃಷ್ಟಿ ಮಾಡಿದ್ದಾರೆ. ರಶ್ಮಿಕಾ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಅಹಂ ಬಿಟ್ಟು ಕನ್ನಡ ಚಿತ್ರರಂಗದ ಇತಿಹಾಸ ತೆರೆದು ನೋಡಿ, ನಟಿ ಪ್ರೇಮಾ, ನಿಧಿ ಸುಬ್ಬಯ್ಯ, ಹರ್ಷಿಕಾ ಪೂಣಚ್ಚರಂತಹ ನಟಿಯರು ನಮ್ಮ ಚಿತ್ರರಂಗಕ್ಕೆ ನೀವು ಬರುವ ಮೊದಲೇ ಎಂಟ್ರಿ ಕೊಟ್ಟಿದ್ರು.ನೀವು ನಿನ್ನೆ ಮೊನ್ನೆ ಬಂದು ಹೀಗೆ ಹೇಳಿಕೆ ನೀಡುವುದು ಸರಿಯಲ್ಲ ಎಂದು ಗುಡುಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



