ಬೆಂಗಳೂರು: RCB ತಂಡದ ಚೊಚ್ಚಲ ಐಪಿಎಲ್ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣ ಸಂಬಂಧ ಅಮಾನುತು ಮಾಡಲಾಗಿದ್ದ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಇದೀಗ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್ ಸೇರಿದಂತೆ ನಾಲ್ವರನ್ನು ಅಮಾನತು ಮಾಡಲಾಗಿತ್ತು. ಈ ಅಮಾನತನ್ನು ಹಿಂಪಡೆದಿರುವ ರಾಜ್ಯ ಸರ್ಕಾರ ಇದೀಗ ಬಿ.ದಯಾನಂದ್ ಅವರನ್ನ ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಎಡಿಜಿಪಿಯಾಗಿ ಸ್ಥಳ ನಿಯೋಜನೆ ಮಾಡಿದೆ. ಐಪಿಎಸ್ ಅಧಿಕಾರಿ ಶೇಖರ್ ಅವರನ್ನು ಗುಪ್ತಚರ ಇಲಾಖೆಯ ಎಸ್‌ಪಿ ಹುದ್ದೆ ನೀಡಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



