ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ನ್ಯಾಯಾಂಗ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿ ಏನಿದೆ ಎಂದು ನನಗೆ ತಿಳಿದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರ ಕೊಟ್ರು.
ಪ್ರಕರಣದ ತನಿಖಾ ವರದಿ ಮುಖ್ಯಮಂತ್ರಿಗಳಿಗೆ ಸಲ್ಲಿಕೆಯಾಗಿದೆ ಎಂದು ಕೇಳಿದಾಗ, ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕುನ್ಹಾ ಅವರ ವರದಿ ಸಲ್ಲಿಕೆಯಾಗುತ್ತಿದೆ ಎಂದಷ್ಟೇ ಗೊತ್ತು. 10ನೇ ತಾರೀಕಿನ ಒಳಗೆ ವರದಿ ನೀಡುವುದಾಗಿ ಹೇಳಿದ್ದರು. ನನಗೂ ಸಮನ್ಸ್ ನೀಡಿದ್ದರು. ನಾನು ವಿಡಿಯೋ ಕಾನ್ಫರೆನ್ಸ್ ಮೂಲಕ ನನ್ನ ಹೇಳಿಕೆ ನೀಡಿದ್ದೆ. ಅವರು ವರದಿ ನೀಡಿರುವುದು ಸಂತೋಷ. ಈ ವರದಿ ನೋಡದೇ ನಾನು ಏನನ್ನೂ ಹೇಳಲು ಸಾಧ್ಯವಿಲ್ಲ. ನಾವು ಪ್ರಕರಣದಲ್ಲಿ ನ್ಯಾಯಾಂಗ ತನಿಖೆ ನಡೆಸಿದ್ದು, ವರದಿಯಲ್ಲಿ ಏನಿದೆ ಎಂದು ನೋಡೋಣ, ಚರ್ಚೆ ಮಾಡೋಣ ಎಂದು ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



