ಚಿತ್ರದುರ್ಗ: ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ್ದ ಆರೋಪಿಗೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ 20 ವರ್ಷ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ.ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಪರಾಧಿ ಬತ್ತಯ್ಯನಹಟ್ಟಿ ಪುನೀತ್ ಕುಮಾರ್ ಶಿಕ್ಷೆಗೊಳಗಾಗಿದ್ದಾನೆ.2023 ಮೇ 2 ರಂದು ಆರೋಪಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು.ಪೊಲೀಸ್ ಇನ್ಸ್ಪೆಕ್ಟರ್ ಸಮೀವುಲ್ಲಾ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ಚಿತ್ರದುರ್ಗ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ ಅಪರಾಧಿಗೆ 30 ಸಾವಿರ ದಂಡ, 20 ವರ್ಷ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.ಪ್ರಕರಣದಲ್ಲಿ ನೊಂದ ಬಾಲಕಿಗೆ 4 ಲಕ್ಷ ಪರಿಹಾರ ನೀಡಲು ಆದೇಶಿಸಿದ್ದಾರೆ.ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಚ್.ಆರ್.ಜಗದೀಶ್ ವಾದ ಮಂಡಿಸಿದ್ದರು.ಪ್ರಕರಣದಲ್ಲಿ ಪೊಲೀಸ್ ಪೇದೆ ಎಂ.ಜಿ.ರಾಘವೇಂದ್ರ ಸಕಾಲಕ್ಕೆ ಸಾಕ್ಷಿಗಳನ್ನು ಹಾಜರುಪಡಿಸಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



