ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಹಾಗೂ ಇತರೆ ಆರೋಪಿಗಳು ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ಗೆ ಹಾಜರಾಗಿದ್ದರು.ಆದರೆ, ಪ್ರಕರಣದ ಮೊದಲನೇ ಆರೋಪಿ ಪವಿತ್ರಾ ಗೌಡ, ಪವನ್, ವಿನಯ್, ಕಾರ್ತಿಕ್ ಮತ್ತು ಧನರಾಜ್ ಗೈರಾಗಿದ್ದರು. ಪವಿತ್ರಾ ಗೌಡ, ವಿನಯ್ ಮತ್ತು ಗೈರಾಗಿದ್ದ ಇತರೆ ಆರೋಪಿಗಳ ಪರ ವಕೀಲರು ವಿಚಾರಣೆಗೆ ಹಾಜರಾತಿಯಿಂದ ವಿನಾಯ್ತಿ ಕೋರಿ ಅರ್ಜಿ ಸಲ್ಲಿಸಿದರು.
ಜು.10ರಿಂದ 30ರವರೆಗೆ ಮತ್ತು ಆ.5ರಿಂದ 17ರ ಅವಧಿಯಲ್ಲಿ ತಿರುಪತಿ ಮತ್ತು ಧರ್ಮಸ್ಥಳ ದೇವಾಲಯಗಳಿಗೆ ಭೇಟಿ ನೀಡಲು ಮತ್ತು ರೆಡ್ ಕಾರ್ಪೆಟ್ ಕಂಪನಿಗೆ ವಸ್ತುಗಳ ಖರೀದಿ ಹಿನ್ನೆಲೆಯಲ್ಲಿ ಹೈದರಾಬಾದ್, ಮಂಗಳೂರು, ದೆಹಲಿಗೆ ಹೋಗಲು ಅನುಮತಿ ನೀಡುವಂತೆ ಕೋರಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿರುವ ವಿಚಾರವನ್ನು ಆಕೆಯ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು.ಅಂತಿಮವಾಗಿ ಎಲ್ಲ ಆರೋಪಿಗಳ ಹಾಜರಾತಿ ದಾಖಲಿಸಿಕೊಂಡ ನ್ಯಾಯಪೀಠ, ಪವಿತ್ರಾ ಗೌಡ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ತನಿಖಾಧಿಕಾರಿಗಳಿಗೆ ಸೂಚಿಸಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



