ದಾವಣಗೆರೆ: ಪರಿಶಿಷ್ಟಜಾತಿಯಲ್ಲಿ ಒಳಮೀಸಲಾತಿ ಜಾರಿಗೊಳ್ಳುವವರೆಗೂ ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿನ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ, ಪ್ರಕ್ರಿಯೆಗಳನ್ನು ತಕ್ಷಣ ಸ್ಥಗಿತಗೊಳಿಸದಿದ್ದರೆ ರಾಜ್ಯ ವ್ಯಾಪಿ ತೀವ್ರ ಸ್ವರೂಪದ ಹೋರಾಟ ನಡೆಸಬೇಕಾದೀತು ಎಂದು ತಾಪಂ ಮಾಜಿ ಸದಸ್ಯ, ಬಿಜೆಪಿ ಮಾಯಕೊಂಡ ಮುಖಂಡ ಆಲೂರು ನಿಂಗರಾಜ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.ಸರ್ಕಾರವು ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕಾತತಿ ಪ್ರಕ್ರಿಯೆ ಕೈಗೊಳ್ಳಲು ಅಧಿಸೂಚನೆ ಹೊರಟಿಸಿದ್ದು ಸರಿ ಯಲ್ಲ. ಮೊದಲು ಒಳ ಮೀಸಲಾತಿ ಜಾರಿ ಗೊಳಿ ಸುವ ಕೆಲಸ ಮಾಡಲಿ. ಆ ನಂತರ ಹುದ್ದೆಗಳ ನೇಮ ಕಕ್ಕೆ ಅಧಿಸೂಚನೆ ಹೊರಡಿಸಲಿ. ಈಗ ಹೊರಡಿಸಿದ ಅಧಿಸೂಚನೆ ಯನ್ನು ತಕ್ಷಣ ತಕ್ಷಣ ಹಿಂಪಡೆದು, ನೇಮಕಾತಿ ಪ್ರಕ್ರಿಯೆ ತಡೆಯಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ರಾಜ್ಯದ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸಬಾರದು. ಈ ಬಗ್ಗೆ ಸಚಿವ ಸಂಪುಟದಲ್ಲೇ ನಿರ್ಣಯವಾಗಿದ್ದು, ಈ ಬಗ್ಗೆ ಸೂಚನೆ ಸಹ ನೀಡಿದೆ. ಆದರೂ ರಾಜ್ಯ ಸರ್ಕಾರ ದಲಿತರಿಗೆ ವಂಚನೆ ಮಾಡಿ, ಸದ್ದಿಲ್ಲದಂತೆ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆಗಳು ಹಾಗೂ ನೇರ ನೇಮಕಾತಿಗೆ ಅಧಿಸೂಚನೆಹೊರಡಿಸಿದ್ದನ್ನು ನೋಡಿದರೆ ಇದು ದಲಿತ ವಿರೋಧಿ ಸರ್ಕಾರವೆಂಬುದು ಸ್ಪಷ್ಟವಾಗುತ್ತದೆ ಎಂದು ದೂರಿದ್ದಾರೆ.ಒಳ ಮೀಸಲಾತಿ ಜಾರಿಗೊಳ್ಳುವವರೆಗೂ ನೇಮಕಾತಿ ಪ್ರಕ್ರಿಯೆ ತಡೆ ಹಿಡಿಯಬೇ ಕೆಂಬ ನಿರ್ಣಯನ್ನು ಇಲಾಖೆಗಳೂ ಪಾಲಿಸಲಿ. ಮೀಸಲಾತಿಯನ್ವಯ ವೃಂದಗಳ ಹುದ್ದೆಗಳಿಗೆ ನೇರನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸಬಾರದು. ಪರಿ ಶಿಷ್ಟ ಜಾತಿಯ ಮೀಸಲು ವರ್ಗೀಕರಣ ಮಾಡುವ ಅಧಿಕಾರವನ್ನು ಆಯಾ ರಾಜ್ಯ ಸರ್ಕಾರಗಳಿಗೆ ನೀಡಿ, ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಆದರೂ, ರಾಜ್ಯ ಸರ್ಕಾರ ಈವರೆಗೆ ಮೀಸಲಾತಿ ವರ್ಗೀಕರಣಕ್ಕೆ ಮುಂದಾಗದ್ದು ಬೇಸರದ ಸಂಗತಿ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೈಜ್ಞಾನಿಕ ದತ್ತಾಂಶ ಆಧರಿಸಿ ಮೀಸಲು ವರ್ಗೀಕರಣಕ್ಕೆ ಮುಂದಾಗಿರುವ ಸರ್ಕಾರ ಮೀಸಲು ವರ್ಗೀಕರಣ ಆಗುವವರೆಗೂ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸಬಾರದು. ಆದರೂ ತೆರೆಮರೆಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವುದು ನಮ್ಮ ಸಮುದಾಯಗಳಿಗೆ ಮಾಡಿದೆ ಘೋರ ಅನ್ಯಾಯವಾಗಿದೆ. ತಕ್ಷಣವೇ ಇಂತಹ ಪ್ರಕ್ರಿಯೆ ಸ್ಥಗಿತ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



