ನೆಲಮಂಗಲ: ರಾಜ ಹಾಗೂ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ದ್ವೇಷದ ರಾಜ ಕೀಯಕ್ಕೆ ಅಂತ್ಯ ಹಾಡುವ ದಿನ ದೂರವಿಲ್ಲ, ಮುಂದಿನ ದಿನ ಗಳಲ್ಲಿ ನಡೆಯುವ ಎಲ್ಲಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೆಸೆಯುವ ಕೆಲಸ ರಾಜ್ಯದ ಜನತೆ ಮಾಡಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಆಯೋಜಿಸಿದ್ದ ಜನರೊಂದಿಗೆ ಜನತಾದಳ ಹಾಗೂ ಸದಸ್ಯತ್ವ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದಅವರು, ರಾಜ್ಯಾದ್ಯಂತ ಜೆಡಿಎಸ್ ಅತ್ಯಂತ ಪ್ರಬಲ ಹಾಗೂ ಜನ ವಿಶ್ವಾಸಿ ಪಕ್ಷ. ಪಕ್ಷವನ್ನು ಮತ್ತಷ್ಟು ಸಂಘಟಿಸಿ ಬಲಪಡಿಸಲಾಗುತ್ತಿದೆ. ಭಾಷಣ ಮಾಡಿದ ಮಾತ್ರಕ್ಕೆ ಪಕ್ಷ ಸಂಘಟನೆ ಮಾಡಲು ಸಾಧ್ಯವಿಲ್ಲ. ಕಾರ್ಯಕರ್ತರನ್ನು ಸಂಘಟಿಸಿ ತಳಮಟ್ಟದಿಂದ ಪಕ್ಷವನ್ನು ಕಟ್ಟುವ ಕೆಲಸ ಮಾಡಬೇಕು ಎಂದರು.
ನಗರದಲ್ಲಿ ಪಕ್ಷದ ಸಾವಿರಾರು ಕಾರ್ಯಕರ್ತರ ಜೊತೆಗೂಡಿ ಬೈಕ್ ಜಾಥಾ ನಡೆಸಿದರು. ಪಕ್ಷದ ಕಾರ್ಯಕರ್ತರು ಹೆದ್ದಾರಿಯಲ್ಲಿ ಪಕ್ಷದ ಬಾವುಟ ಹಿಡಿದು ಜೈಕಾರ ಕೂಗಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



