ಬೆಂಗಳೂರು: ಬೆಂಗಳೂರಿನ ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವ ಬರ್ಬರ ಹತ್ಯೆ ಹಿಂದೆ ಮಾಜಿ ಸಚಿವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಪಾತ್ರದ ಆರೋಪದ ಮೇಲೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜಮೀನಿನ ವಿಚಾರವಾಗಿ ರೌಡಿಶೀಟರ್ ಶಿವಪ್ರಕಾಶ್ ಹಾಗೂ ಭೈರತಿ ಬಸವರಾಜ್ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ ಎಂಬ ಆರೋಪವಿದೆ.
ಶಿವ ಕೊಲೆಗೆ ಭೈರತಿ ಕುಮ್ಮಕ್ಕು ಆರೋಪ
ಬೆಂಗಳೂರಿನ ಭಾರತೀ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಮಾಜಿ ಸಚಿವ ಭೈರತಿ ಬಸವರಾಜ್ ಎ5 ಆರೋಪಿ ಎಂದು ಉಲ್ಲೇಖಿಸಿಲಾಗಿದೆ. ಕಳೆದ ರಾತ್ರಿ ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವು ಕೊಲೆ ನಡೆದಿದೆ. ಕೊಲೆಗೆ ಭೈರತಿ ಬಸವರಾಜ್ ಕುಮ್ಮಕ್ಕು ನೀಡಿದ್ದಾರೆ ಎಂದು ರೌಡಿಶೀಟರ್ ಶಿವಕುಮಾರ್ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



