ಉಡುಪಿ: ಆರ್‌ಎಸ್‌ಎಸ್ ನಿಷೇಧಿಸುವುದಕ್ಕೆ ಮಾಜಿಪ್ರಧಾನಿಗಳಾದ ಜವಾಹರ್ ಲಾಲ್ ನೆಹರು, ಇಂದಿರಾ ಹಾಗೂ ರಾಜೀವ್ ಗಾಂಧಿ ಕೂಡ ಪ್ರಯತ್ನಿಸಿದ್ದರೂ ಆದರೂ ಅವರ ಕೈಲಿ ಆಗಿಲ್ಲ. ಮುಂದೆ ರಾಹುಲ್ ಗಾಂಧಿ ಅವರಿಂದಲೂ ಆಗುವುದಿಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಟಾಂಗ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಂಬೇಡ್ಕರ್ ಅವರೇ ಆರ್‌ಎಸ್‌ಎಸ್ ಅಸ್ಪೃಶ್ಯತೆ – ಜಾತೀಯತೆ ಇಲ್ಲದ ಸಂಘಟನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಪ್ರಿಯಾಂಕ್ ಖರ್ಗೆ, ಬಿ.ಕೆ.ಹರಿಪ್ರಸಾದ್ ಅವರು ಆರ್‌ಎಸ್‌ಎಸ್ ಬಗ್ಗೆ ಲಘುವಾಗಿ ಮಾತನಾಡಿ ಸಮಯ ವ್ಯರ್ಥ ಮಾಡಬಾರದು ಎಂದು ತಿರುಗೇಟು ನೀಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



