ಬ್ಲಾಕ್ ಬ್ಲಸ್ಟರ್ ಸಿನಿಮಾಗಳಾದ ತೆಲುಗಿನ ‘ಅರ್ಜುನ್ ರೆಡ್ಡಿ’ ಹಿಂದಿಯ ‘ಅನಿಮಲ್’ ಚಲನಚಿತ್ರಗಳ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ರಿಷಭ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ-1’ ಸಿನಿಮಾವನ್ನು ಹಾಡಿ ಹೊಗಳಿದ್ದಾರೆ. ಇದೊಂದು ನೈಜವಾದ ಮಾಸ್ಟರ್ ಪೀಸ್ ಎಂದಿರುವ ಸಂದೀಪ್ ರೆಡ್ಡಿ, ಇದು ಅಲುಗಾಡಿಸಲು ಆಗದಂತಹ ಚಿತ್ರ ಎಂದಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರ ಸಂಗೀತವನ್ನು ಮೆಚ್ಚಿ ಬರೆದುಕೊಂಡಿದ್ದಾರೆ. ನಿನ್ನೆ ಪ್ರಪಂಚದಾದ್ಯಂತ ಬಿಡುಗಡೆಯಾಗಿರುವ ‘ಕಾಂತಾರ-1’ ಸಿನಿಮಾಗೆ ಎಲ್ಲೆಡೆ ಭರಪೂರ ಆರಂಭ ಸಿಕ್ಕಿದ್ದು, ಚಿತ್ರದ ಗಳಿಕೆ ಬಗ್ಗೆಯು ಚರ್ಚೆ ನಡೆದಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ನಟ ರಿಷಭ್ ಶೆಟ್ಟಿ ಧನ್ಯವಾದ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







