ಸವದತ್ತಿ ಸುಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಳ್ಳ, ಕೊಳ್ಳ ಉಕ್ಕಿ ಹರಿದು ಯಲ್ಲಮ್ಮನ ದೇವಸ್ಥಾನ ದಲ್ಲಿದ್ದಹುಂಡಿಯೊಳಗೆ ಅಪಾರಪ್ರಮಾಣದ ನೀರು ನುಗ್ಗಿದ್ದರಿಂದ ಹುಂಡಿಯಲ್ಲಿದ್ದ ನೋ ಟುಗಳೆಲ್ಲಾ ನೆನೆದಿದ್ದು, ಅದನ್ನು ದೇವ ಸ್ಥಾನ ಪ್ರಾಂಗಣದಲ್ಲಿ ಹಾಕಿ ಒಣಗಿಸಲಾಗುತ್ತಿದೆ.ಮಳೆ ನೀರು ಸಂಗ್ರಹಗೊಂಡ ಹುಂಡಿ ಗಳನ್ನು ಧಾರ್ಮಿಕದತ್ತಿ ಇಲಾಖೆ, ಸವದತ್ತಿ ತಹಸೀಲ್ದಾರ್ಕಚೇರಿಯ ಸಿಬ್ಬಂದಿ, ಬೈಲ್ ಹೊಂಗಲ ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿ ಸೇರಿದಂತೆ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಮ್ಮುಖದಲ್ಲಿ ಹುಂಡಿಯಲ್ಲಿದ್ದ ಹಣವನ್ನೆಲ್ಲ ಹೊರ ತೆಗೆದು ಒಣಗಿಸುವ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಯಲ್ಲಮ್ಮನ ಗುಡ್ಡಕ್ಕೆ ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸುತ್ತಾರೆ. ದೇವಸ್ಥಾನ ದಲ್ಲಿರುವ ಹುಂಡಿಯಲ್ಲಿ ನಗದು, ಚಿನ್ನ, ಬೆಳ್ಳಿ ಆಭರಣ ಹಾಕಿ ಭಕ್ತಿ ಸಮರ್ಪಿಸುವದು ವಾಡಿಕೆಯಾಗಿದೆ. ಜೂ.30ರವರೆಗೆ ₹3.81 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹವಾಗಿತ್ತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







